HomeKarnatakaಕರ್ನಾಟಕ ಬಜೆಟ್ 2026:  ತೋಟಗಾರಿಕೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ

ಕರ್ನಾಟಕ ಬಜೆಟ್ 2026:  ತೋಟಗಾರಿಕೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ

ಹಣಕಾಸು ಸಚಿವರೂ ಆಗಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕರ್ನಾಟಕ ಬಜೆಟ್ 2026 ಮಂಡಿಸಿದರು. ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ತೋಟಗಾರಿಕೆ ಕ್ಷೇತ್ರಕ್ಕೆ ಹಲವಾರು ಘೋಷಣೆಗಳನ್ನು ಮಾಡಿದರು.

ಶುಕ್ರವಾರ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂದು ಹೇಳಿದರು. “ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ” ಎಂದು ಘೋಷಣೆ ಮಾಡಿದರು.

ತೋಟಗಾರಿಕಾ ಇಲಾಖೆ ಘೋಷಣೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ
  • ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ
  • ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ
  • ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular