HomeKarnatakaಕರ್ನಾಟಕ ಬಜೆಟ್ 2026: ಎಲ್ಲಾ ಗ್ರಾಮ ಪಂಚಾಯಿತಿಗಳ ಹೆಸರು ಬದಲಾವಣೆ

ಕರ್ನಾಟಕ ಬಜೆಟ್ 2026: ಎಲ್ಲಾ ಗ್ರಾಮ ಪಂಚಾಯಿತಿಗಳ ಹೆಸರು ಬದಲಾವಣೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರ ಶುಕ್ರವಾರ ಕರ್ನಾಟಕ ಬಜೆಟ್ 2026 ಮಂಡಿಸಿದರು. ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕುರಿತು ಹಲವಾರು ಘೋಷಣೆಗಳನ್ನು ಮಾಡಿದರು.

ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದರು. ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಅವರು, ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಹೆಸರು ಬದಲಾವಣೆ ಮಾಡಲಾಗುತ್ತದೆ ಎಂದು ಘೋಷಿಸಿದರು.

ಬಜೆಟ್ ಭಾಷಣದಲ್ಲಿ ಅವರು, “ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ‘ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಘೋಷಣೆಗಳು

  • 5ನೇ ರಾಜ್ಯ ಹಣಕಾಸು ಆಯೋಗವು 2026-2030ರ ವರದಿಯನ್ನು ಸಲ್ಲಿಸಿದೆ. ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಸಾಲೇತರ ನಿವ್ವಳ ಸ್ವಂತ ರಾಜಸ್ವ ಆದಾಯದ ಪ್ರಮಾಣವನ್ನು ಶೇ 48 ರಿಂದ ಶೇ 50ಕ್ಕೆ ಹೆಚ್ಚಿಸಲಾಗುವುದು. ಇದರಲ್ಲಿ ಶೇ 35ರಷ್ಟನ್ನು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹಾಗೂ ಶೇ 15ರಷ್ಟನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುತ್ತದೆ.
  • ಜಲ ಜೀವನ್ ಮಿಷನ್ 69,488 ಕೋಟಿ ರೂ. ಮೊತ್ತದ ಅನುಮೋದನೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಪಾಲು 30,888 ಕೋಟಿ ರೂ.ಗಳಾಗಿದ್ದು, ರಾಜ್ಯ ಸರ್ಕಾರದ ಪಾಲು 38,600 ಕೋಟಿ ರೂ.ಗಳಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಇದುವರೆಗೆ ಕೇವಲ 11,786 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಇನ್ನೂ 19,102 ಕೋಟಿ ರೂ.ಗಳನ್ನು ಮಾಡಬೇಕಾಗಿರುತ್ತದೆ.
  • ಸರ್ಕಾರ ಬಿಡುಗಡೆ ಬಿಡುಗಡೆ ಕೇಂದ್ರ ರಾಜ್ಯ ಸರ್ಕಾರದಿಂದ ಒದಗಿಸಬೇಕಾದ ಅನುದಾನದಲ್ಲಿ ಈಗಾಗಲೇ 27,098 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, 11,502 ಕೋಟಿ ರೂ.ಗಳನ್ನು ಮಾತ್ರ ಮಾಡಬೇಕಾಗಿರುತ್ತದೆ.
  • ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದಿದ್ದರೂ ಸಹ ಈ ಯೋಜನೆಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಒಟ್ಟಾರೆ 15,500 ಕೋಟಿ ರೂ.ಗಳಷ್ಟು ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 10,433 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿರುತ್ತದೆ.
  • 2004ರಲ್ಲಿ ಜಾರಿಗೆ ತಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು (MGNREGS) ಗ್ರಾಮೀಣ ಭಾಗದಲ್ಲಿ ವಿಕೇಂದ್ರೀಕೃತ ಯೋಜನೆಯನ್ನು ರೂಪಿಸುವುದಕ್ಕೆ ಉತ್ತೇಜನ ನೀಡುವುದರೊಂದಿಗೆ ಗ್ರಾಮೀಣ ಮೂಲಸೌಕರ್ಯ ಮತ್ತು ದೀರ್ಘಕಾಲೀನ ಬಾಳಿಕೆ ಬರುವ ಸಮುದಾಯ ಆಸ್ತಿಗಳ ಸೃಷ್ಟಿಗೆ ಮಹತ್ವದ ಕೊಡುಗೆಯನ್ನು ನೀಡಿರುತ್ತದೆ.
  • ಈ ಯೋಜನೆಯಡಿ ರಾಜ್ಯದಲ್ಲಿ ಸುಮಾರು 182 ಕೋಟಿ ಮಾನವ ದಿನಗಳ ಉದ್ಯೋಗವು ಸೃಜನೆಯಾಗಿರುತ್ತದೆ. ಒಟ್ಟಾರೆ 61,000 ಕೋಟಿ ರೂ. ವೇತನ ಪಾವತಿಸಲಾಗಿದ್ದು, ಸುಮಾರು 77 ಲಕ್ಷ ಆಸ್ತಿಗಳು ನಿರ್ಮಾಣವಾಗಿರುತ್ತವೆ. ಪ್ರಸಕ್ತ ವರ್ಷದಲ್ಲೇ ಸುಮಾರು 71 ಲಕ್ಷ ಗ್ರಾಮೀಣ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆದಿರುತ್ತವೆ.
  • ಇದೀಗ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರದ್ದುಗೊಳಿಸಿ VB-G-RAM-G ಯೋಜನೆಯನ್ನು ಜಾರಿಗೆ ತಂದಿದ್ದು, ಇದು ನರೇಗಾ ಯೋಜನೆಯ ಮೂಲೋದ್ದೇಶವಾದ ಹಕ್ಕು ಆಧಾರಿತ (Rights-based) ದೃಷ್ಟಿಕೋನವನ್ನು ದುರ್ಬಲಗೊಳಿಸುವ ಕ್ರಮವಾಗಿದೆ ಹಾಗೂ ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಗೆ ವಿರುದ್ಧವಾಗಿರುತ್ತದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular