HomeKarnatakaಕರ್ನಾಟಕ ಬಜೆಟ್ 2026: ಇನ್ನು ಗ್ರಾಮೀಣ ಜನರು ಮನೆ ಪಡೆಯುವುದು ಸುಲಭ

ಕರ್ನಾಟಕ ಬಜೆಟ್ 2026: ಇನ್ನು ಗ್ರಾಮೀಣ ಜನರು ಮನೆ ಪಡೆಯುವುದು ಸುಲಭ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರ ಶುಕ್ರವಾರ ಕರ್ನಾಟಕ ಬಜೆಟ್-2026 ಮಂಡಿಸಿದರು. ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಅವರು ಗ್ರಾಮೀಣ  ಭಾಗದ ಜನರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಈ ಬಾರಿ 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ವಿಚಾರದಲ್ಲಿ ಮಹತ್ವದ ಬದಲಾವಣೆ ತರಲಾಗುತ್ತದೆ ಎಂದು ಘೋಷಣೆ ಮಾಡಿದರು.

ಬಜೆಟ್ ಭಾಷಣದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ವಸತಿ ಯೋಜನೆಗಳಡಿಯಲ್ಲಿ 7,328 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟಾರೆ 4,19,454 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಹಿಂದಿನ ಸರ್ಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ನಮ್ಮ ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ವಸತಿ ಯೋಜನೆಗಳಡಿ BLC ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿಯನ್ನು ಮಂಜೂರು ಮಾಡಲಾಗುವುದು. ಸದರಿ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡುವ ಸಹಾಯಧನ 1.20 ಲಕ್ಷ ರೂ. ಗಳಿಂದ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 2 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಫಲಾನುಭವಿಗಳ ಆಯ್ಕೆ:  ರಾಜ್ಯ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು Manual ಲಾಟರಿ ಪ್ರಕ್ರಿಯೆಯ ಮುಖಾಂತರ ಆಯ್ಕೆಗೊಳಿಸಲಾಗುತ್ತಿದ್ದು, ಇನ್ನು ಮುಂದೆ ಆನ್‌ಲೈನ್‌ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಆಯ್ಕೆಗೊಳಿಸಲಾಗುವುದು ಎಂದರು.

ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ (ಎ.ಹೆಚ್‌.ಪಿ) 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರದಿಂದ 1,136 ಕೋಟಿ ರೂ.ಗಳ ಅನುದಾನವನ್ನು ಹೆಚ್ಚುವರಿಯಾಗಿ ಫಲಾನುಭವಿಗಳ ವಂತಿಕೆಗೆ ಎದುರಾಗಿ ಒದಗಿಸಿ 2025-26ನೇ ಸಾಲಿಗೆ ಒಟ್ಟಾರೆ 79,134 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಿಂದ ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿದಂತಾಗಿದೆ ಎಂದು ಹೇಳಿದರು.

ವಸತಿ ಇಲಾಖೆ ಘೋಷಣೆಗಳು

  • ʻಕೆ.ಹೆಚ್‌.ಬಿ ಸೂರ್ಯ ಕ್ರೀಡಾ ಗ್ರಾಮʼ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲ್ಲೂಕಿನಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಕ್ರಿಕೆಟ್‌ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು.
  • ಕೆ.ಹೆಚ್‌.ಬಿ. ವತಿಯಿಂದ ನಮ್ಮ ಮನೆ ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸಲು ಉದ್ದೇಶಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular