HomeKarnatakaಕರ್ನಾಟಕ ಬಜೆಟ್ 2026: ದೇವಾಲಯಕ್ಕೆ ಸಿದ್ದರಾಮಯ್ಯ ಕೊಡುಗೆಗಳು

ಕರ್ನಾಟಕ ಬಜೆಟ್ 2026: ದೇವಾಲಯಕ್ಕೆ ಸಿದ್ದರಾಮಯ್ಯ ಕೊಡುಗೆಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕರ್ನಾಟಕ ಬಜೆಟ್-2026 ಮಂಡಿಸಿದರು. ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ (ಮುಜರಾಯಿ) ಹಲವು ಘೋಷಣೆಗಳನ್ನು ಮಾಡಿದರು.

ಸಿದ್ದರಾಮಯ್ಯ ಅವರು ಈ ಬಾರಿ 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದರು. ಕನ್ನಡಿಗರು ಬಜೆಟ್‌ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ಸತತ ಮೂರು ಗಂಟೆಗೂ ಹೆಚ್ಚು ಕಾಲ ಬಜೆಟ್ ಭಾಷಣ ಮಾಡಿದ ಸಿದ್ದರಾಮಯ್ಯ ದೇವಾಲಯಗಳಿಗೆ ನೀಡಿದ ಕೊಡುಗೆ ಏನು? ಇಲ್ಲಿದೆ ವಿವರಗಳು.

ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿಬಿಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ 5 ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು 3 ವರ್ಷಗಳಲ್ಲಿ ಪುನರುಜ್ಜೀವನಗೊಳಿಸಲು ʻಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆʼ ಕೈಗೊಳ್ಳಲಾಗುತ್ತಿದೆ. ಈ ಉದ್ದೇಶಕ್ಕೆ
5 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಘೋಷಣೆ ಮಾಡಿದರು.

ದೇವಾಲಯ ಅಭಿವೃದ್ಧಿ ಪ್ರಾಧಿಕಾರ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲು ಉದ್ದೇಶಿಸಿದೆ ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದರು.

ಹೊರ ರಾಜ್ಯದ ಪುಣ್ಯಕ್ಷೇತ್ರಗಳಲ್ಲಿರುವ ಕರ್ನಾಟಕ ರಾಜ್ಯದ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ಧಿಪಡಿಸಲು ಈ ಕೆಳಕಂಡಂತೆ ಕ್ರಮ ಕೈಗೊಳ್ಳಲಾಗುವುದು

  • ವಾರಣಾಸಿಯಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿರುವುರಿಂದ ಹೊಸ ರಾಜ್ಯ ಛತ್ರವನ್ನು ನಿರ್ಮಿಸಲಾಗುವುದು.
    • ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸೇರಿದ ಜಾಗದಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿದ್ದು, ಇದರ ನವೀಕರಣವನ್ನು ಕೈಗೊಳ್ಳಲಾಗುವುದು.
    • ಶ್ರೀಶೈಲಂ ಕ್ಷೇತ್ರದಲ್ಲಿ ಹೊಸದಾಗಿ ಯಾತ್ರಿನಿವಾಸ ನಿರ್ಮಾಣ ಮಾಡಲಾಗುವುದು.
    • ತುಳಜಾಪುರದಲ್ಲಿ ಪ್ರಸ್ತುತ ಇರುವ ಛತ್ರವನ್ನು ಹೊಸದಾಗಿ ನಿರ್ಮಾಣ ಮಾಡಲಾಗುವುದು.

ಬಜೆಟ್‌ನಲ್ಲಿ ದೇವಾಲಯ ಕುರಿತು ಇತರ ಘೋಷಣೆಗಳು

  • ಬೆಂಗಳೂರು ನಗರದ ಹೃದಯ ಭಾಗವಾದ ಕೆಂಪೇಗೌಡ ವೃತ್ತದಲ್ಲಿ ಇಲಾಖೆಗೆ ಸೇರಿದ ಬಂಡಿಶೇಷಮ್ಮ ಛತ್ರದ ಜಾಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ (PPP) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
    • ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ತಂತ್ರಜ್ಞಾನ ಆಧಾರಿತ ಕೌನ್ಸೆಲಿಂಗ್ (Counselling) ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular