HomeHealthಕರ್ನಾಟಕ ಬಜೆಟ್ 2026: ಸೂಪರ್ ಸ್ಪೆಷಾಲಿಟಿ ಸೇರಿ ವಿವಿಧ ಆಸ್ಪತ್ರೆಗಳ ಘೋಷಣೆ

ಕರ್ನಾಟಕ ಬಜೆಟ್ 2026: ಸೂಪರ್ ಸ್ಪೆಷಾಲಿಟಿ ಸೇರಿ ವಿವಿಧ ಆಸ್ಪತ್ರೆಗಳ ಘೋಷಣೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರ ಶುಕ್ರವಾರ ಕರ್ನಾಟಕ ಬಜೆಟ್-2026 ಮಂಡಿಸಿದರು. ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಅವರು ಹಲವು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಘೋಷಣೆ ಮಾಡಿದರು.

ಸಿದ್ದರಾಮಯ್ಯ ಅವರು ಈ ಬಾರಿ 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಮಾಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಗೆ ಘೋಷಣೆ ಮಾಡಿದ ಯೋಜನೆಗಳು ಇಲ್ಲಿವೆ.

  • ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್‌ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ 92 ಕೋಟಿ ರೂ. ವೆಚ್ಚದ
    ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
  • 236 ಕೋಟಿ ರೂ. ವೆಚ್ಚದ‌ ಹುಬ್ಬಳ್ಳಿಯ ಜಯದೇವ
    ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು.
  • ಬೆಂಗಳೂರಿನ ರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್‌ ಸೂಪರ್‌ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.
  • 2026-27ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.
  • ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು.
  • ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
  • ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು. 
  • ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
  • ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್‌ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು.
  • ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.
  • ಬೆಂಗಳೂರಿನ ವಾಣಿ ವಿಲಾಸ್‌ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.
  • ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು.
  • ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್‌ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular