HomeKarnatakaBIG NEWS: ರಾಜ್ಯದ 12 ಜಿಲ್ಲೆಗಳಲ್ಲಿ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

BIG NEWS: ರಾಜ್ಯದ 12 ಜಿಲ್ಲೆಗಳಲ್ಲಿ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿನ ಕೊರತೆಯಿಂದಾಗಿ ಗಿಡ-ಮರಗಳು ಸಾಯುತ್ತಿವೆ. ಬಿಸಿಲ ಝಳ, ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಕೊಂಚ ಸಮಾದಾನದ ಸುದ್ದಿ ನೀಡಿದೆ. ರಾಜ್ಯದ 12 ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಳಗಾವಿಯಲ್ಲಿ 19.0 ಕನಿಷ್ಠ ಉಷ್ಣಾಂಶ ದಖಲಾಗಿದ್ದರೆ, ಕಲಬುರ್ಗಿಯಲ್ಲಿ 40.2 ಡಿಗ್ರಿ ಗರಿಷ್ಠ ಉಷ್ಣಾಶ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular