HomeKarnatakaಕರ್ನಾಟಕದಲ್ಲಿ 3 IAS, 5 KAS ಅಧಿಕಾರಿಗಳ ವರ್ಗಾವಣೆ; ಪ್ರಮುಖ ಹುದ್ದೆಗಳಿಗೆ ಹೊಸ ನೇಮಕ

ಕರ್ನಾಟಕದಲ್ಲಿ 3 IAS, 5 KAS ಅಧಿಕಾರಿಗಳ ವರ್ಗಾವಣೆ; ಪ್ರಮುಖ ಹುದ್ದೆಗಳಿಗೆ ಹೊಸ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಕಾರಣಗಳು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳು ತಕ್ಷಣದಿಂದಲೇ ಹೊಸ ಹುದ್ದೆಯ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮುಖ್ಯಮಂತ್ರಿಗಳ ಸಚಿವಾಲಯ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಹುದ್ದೆ ಬದಲಾವಣೆ ಮಾಡಲಾಗಿದೆ.

ನಕುಲ್ ಎಸ್.ಎಸ್‌ಗೆ ಹೆಚ್ಚುವರಿ ಜವಾಬ್ದಾರಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ನಕುಲ್ ಎಸ್.ಎಸ್. ಅವರ ಹುದ್ದೆಯನ್ನು ಮುಂದುವರಿಸಲಾಗಿದೆ. ಇದರ ಜೊತೆಗೆ, ಹೊಸದಾಗಿ ರಚಿಸಲಾಗಿರುವ ಜಾಗತಿಕ ಹೂಡಿಕೆ ಮತ್ತು ಅನಿವಾಸಿ ಭಾರತೀಯ ವ್ಯವಹಾರಗಳ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಪ್ರಭಾರ ವಹಿಸಲಾಗಿದೆ.

ಐಎಎಸ್ ಅಧಿಕಾರಿಗಳ ವರ್ಗಾವಣೆ

ನಕುಲ್ ಎಸ್.ಎಸ್. — ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯಲಿದ್ದು, ಹೊಸದಾಗಿ ಸೃಜಿಸಲಾದ ಜಾಗತಿಕ ಹೂಡಿಕೆ ಮತ್ತು ಅನಿವಾಸಿ

ಭಾರತೀಯ ವ್ಯವಹಾರಗಳ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಪ್ರಭಾರ ವಹಿಸಲಿದ್ದಾರೆ.

ಕೀರ್ತನಾ ಎಚ್.ಎಸ್. — ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಯಿಂದ ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಮೀನಾಕ್ಷಿ ಆರ್ಯ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರ ಹುದ್ದೆಯಿಂದ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ನೇಮಕಗೊಂಡಿದ್ದಾರೆ.

ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಡಾ. ಆರತಿ ಆನಂದ್ ಸ್ಥಳ ನಿರೀಕ್ಷೆಯಲ್ಲಿದ್ದ ಅವರನ್ನು ಬೆಂಗಳೂರಿನ ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು (ಆಡಳಿತ) ಆಗಿ ನೇಮಕ ಮಾಡಲಾಗಿದೆ.

ಅರ್ಚನಾ ಸಿ. : ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು (ಆಡಳಿತ) ಹುದ್ದೆಯಿಂದ ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ನಿಯಂತ್ರಕರಾಗಿ ವರ್ಗಾವಣೆಗೊಂಡಿದ್ದಾರೆ.

ಡಾ. ಕವಿತಾ ಯೋಗಪ್ಪನವರ್ : ಕೌಶಲ್ಯಾಭಿವೃದ್ಧಿ ಇಲಾಖೆಯ ಸಂಜೀವಿನಿ-KSRLPS ಮುಖ್ಯ ಕಾರ್ಯಾಚರಣೆ ಅಧಿಕಾರಿ ಹುದ್ದೆಯಿಂದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಆಗಿ ನೇಮಕಗೊಂಡಿದ್ದಾರೆ.

ಅಪೇಕ್ಷಾ ಸತೀಶ್ ಪವಾರ್ : ಸ್ಥಳ ನಿರೀಕ್ಷೆಯಲ್ಲಿದ್ದ ಅವರನ್ನು ಬೆಂಗಳೂರಿನ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾಗಿ ನೇಮಕ ಮಾಡಲಾಗಿದೆ. ಜೊತೆಗೆ ಇ-ಆಡಳಿತ/ಮಾಹಿತಿ ತಂತ್ರಜ್ಞಾನ ಇಲಾಖೆಯ ಉಪ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ವಹಿಸಲಿದ್ದಾರೆ.

ಅನಿಲಕುಮಾರ್ ಹ. ಡವಳಗಿ : ವಿಜಯಪುರ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಕಂದಾಯ) ಹುದ್ದೆಯಿಂದ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular