HomeKarnatakaರಾಜ್ಯದ 9 ಜಿಲ್ಲೆಗಳಲ್ಲಿ ಮೈಕೊರೆವ ಚಳಿ ಜೊತೆಗೆ ಮುಂದಿನ ವಾರದಿಂದ ಮಳೆ

ರಾಜ್ಯದ 9 ಜಿಲ್ಲೆಗಳಲ್ಲಿ ಮೈಕೊರೆವ ಚಳಿ ಜೊತೆಗೆ ಮುಂದಿನ ವಾರದಿಂದ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಮೈಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಮುಂದಿನ ವಾರದಿಂದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 1 ರಿಂದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular