ಬೆಂಗಳೂರು: ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ತಾಂತ್ರಿಕೇತರ ಹಾಗೂ ತಾಂತ್ರಿಕ- ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ9KEA) ಅಧಿಸೂಚನೆ ಹೊರಡಿಸಲಾಗುತ್ತದೆ.
ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ.
ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ ಅರ್ಜಿ ಸಲ್ಲಿಸಬಹುದು ಎಂಬುದರ ವಿವರಗಳು ಈ ಲಿಂಕ್ ನಲ್ಲಿ ನೀಡಲಾಗಿದೆ.
ಪಠ್ಯಕ್ರಮದ ವಿವರಗಳನ್ನು ಕೂಡ ನೀಡಲಾಗಿದೆ. ಒಮ್ಮೆ ನೋಡಿಕೊಂಡು ಅಧ್ಯಯನ ಆರಂಭಿಸಿ.
ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಹಾಗೂ ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ತಾಂತ್ರಿಕ ಹುದ್ದೆಗಳು 261 ಇದ್ದು, ನಂತರದ ದಿನಗಳಲ್ಲಿ ಇನ್ನೂ ಹೊಸ ಇಲಾಖೆ ಮತ್ತು ಹುದ್ದೆಗಳು ಸೇರುವ ಸಾಧ್ಯತೆ ಇದೆ.
ಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಪ್ರಕಟಣೆಯ ಲಿಂಕ್ ಈ ಕೆಳಗೆ ಇದ್ದು, ಅದರ ಮೇಲೆ ಕ್ಲಿಕ್ ಮಾಡಲು ಸೂಚಿಸಲಾಗಿದೆ.
VER_REC_NOTE_31082026kannada.pdf https://share.google/3PBoWq7RAGOH6r3kv
#KEA Recruitment:
ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ತಾಂತ್ರಿಕೇತರ ಹಾಗೂ ತಾಂತ್ರಿಕ- ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ.
ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ.
ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 1, 2026

