HomeLatest NewsGOOD NEWS : ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

GOOD NEWS : ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ http//kacdc.karnatka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-“ಜಿ”ಯಲ್ಲಿ ಪಡೆದಿರಬೇಕು. ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 , ವಿಶೇಷ ಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸಾಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ಮಾರ್ಗಸೂಚಿ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಅರ್ಹತೆಗಳ ಸಂಕ್ಷಿಪ್ತ ವಿವರಗಳಿಗೆ http//kacdc.karnatka.gov.in ಹಾಗೂ ನಿಗಮದ ಸಹಾಯವಾಣಿ 9448451111 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular