HomeKarnatakaBIG NEWS: ವಿಧಾನಸಭಾ ಚುನಾವಣೆ; ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್

BIG NEWS: ವಿಧಾನಸಭಾ ಚುನಾವಣೆ; ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದೇ ದಿನ ಬಾಕಿಯಿದೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಗಡಿ ಜಿಲ್ಲೆಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಿ ಬಿಡಲಾಗುತ್ತಿದೆ. ಹೊರ ರಾಜ್ಯಗಳಿಂದ ಬರುವ ವಾಹನಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆ ಸಿಬ್ಬಂದಿ, ಪೊಲೀಸರು, ಅಬಕಾರಿ ಸಿಬ್ಬಂದಿ ಸೇರಿದಂತೆ 10ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಗಡಿಯಲ್ಲಿ ನಿಯೋಜಿಸಲಾಗಿದೆ. ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ, ವಿಜಯಪುರ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅಕ್ರಮ ಹಣ, ಮದ್ಯ, ಆಮಿಷಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular