ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಕರ್ನಾಟಕದ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಿರುವ ಬಿಜೆಪಿ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ.
2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಸಹ ಪ್ರಭಾರಿಯಾಗಿ ನೇಮಿಸಲಾಗಿದೆ.
ಅಣ್ಣಾಮಲೈ ಈ ಹಿಂದೆ ಐಪಿಎಸ್ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎಸ್.ಪಿ. ಆಗಿ ಸೇವೆ ಸಲ್ಲಿಸಿದ್ದರು. ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
Union Minister Dharmendra Pradhan appointed as the BJP's Incharge and Tamil Nadu BJP president K Annamalai appointed as the Co-Incharge for the upcoming #KarnatakaElection2023 pic.twitter.com/UZQIonyXdQ
— ANI (@ANI) February 4, 2023