ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕುಮಾರ್ ಬಂಗಾರಪ್ಪ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವ ಕೆಬಿಎ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕುಮಾರ್ ಬಂಗಾರಪ್ಪ ಕರ್ನಾಟಕ ಬ್ಯಾಡ್ಮಿಂತನ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಡಿಸೆಂಬರ್ 28ರಂದು ನಡೆದ ಕೆಬಿಎ ಚುನಾವಣೆಯಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದರು. 2025-2029ನೇ ಸಾಲಿನ ಆಡಳಿತ ಮಂಡಳಿಗೆ ನಡೆದಿದ್ದ ಚುನಾವಣೆಯಲ್ಲಿ ಕುಮಾರ್ ಬಂಗಾರಪ್ಪ ಬಣ ಭರ್ಜರಿ ಜಯಗಳಿಸಿತ್ತು. ಈ ಹಿನ್ನೆಲೆಯಲ್ಲಿ ಕುಮಾರ್ ಬಂಗಾರಪ್ಪ ಇಂದು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

