ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ( ಆಗಸ್ಟ್ 13) ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ತುಸು ನೆಮ್ಮದಿ ಸಿಗುವ ನಿರೀಕ್ಷೆಯಿದೆ.
ಕಾವೇರಿ ನೀರು ಹಂಚಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದ್ದು, ರಾಜ್ಯದಾದ್ಯಂತ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ KSRTC ಹಾಗೂ ಬೆಂಗಳೂರಿನ BMTC ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಉದ್ಯೋಗಿಗಳು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ತಮ್ಮ ದೈನಂದಿನ ಪ್ರಯಾಣವನ್ನು ಮುಂದುವರಿಸಬಹುದಾಗಿದೆ.
ಕಾವೇರಿ ನೀರು ಹಂಚಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದ್ದು, ರಾಜ್ಯದಾದ್ಯಂತ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಬಂದ್ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳು, ಆಟೋ, ಕ್ಯಾಬ್ ಸೇರಿದಂತೆ ಕೆಲವು ಸಾರಿಗೆ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ, ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.ಬಂದ್ ವೇಳೆ ಪ್ರತಿಭಟನೆಗಳು ನಡೆಯುವ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಅಥವಾ ಮಾರ್ಗ ಬದಲಾವಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಸುವುದು ಉತ್ತಮ.