HomeKarnatakaಕಾವೇರಿ ನದಿ ನೀರು ವಿವಾದ: ಅಖಂಡ ಕರ್ನಾಟಕ ಬಂದ್ ನಿಂದ ಹಿಂದೆ ಸರಿದ ಸಂಘಟನೆಗಳು?

ಕಾವೇರಿ ನದಿ ನೀರು ವಿವಾದ: ಅಖಂಡ ಕರ್ನಾಟಕ ಬಂದ್ ನಿಂದ ಹಿಂದೆ ಸರಿದ ಸಂಘಟನೆಗಳು?

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬೀಡುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಆಗಸ್ಟ್ ೧೩ರ ಅಖಂಡ ಕರ್ನಾಟಕ ಬಂದ್ ಬಹುತೇಕ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.

ರಾಜ್ಯದಲ್ಲಿ ಸದ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಸಮಸ್ಯೆ ಸದ್ಯಕ್ಕಿಲ್ಲ. ಹಾಗಾಗಿ ಬಂದ್ ಪ್ರತಿಭಟನೆಯಿಂದ ಹಲವು ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹಿಂದೆ ಸರಿದಿವೆ. ಆದರೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ಬಂದ್ ಗೆ ಪಟ್ಟು ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ವಾಟಾಳ್ ನಾಗರಾಜ್ ಬಣದೊಂದಿಗೆ ಗುರುತಿಸಿಕೊಂಡಿರುವ ಸಾರಾ ಗೋವಿಂದ್, ಬಂದ್‌ಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರು ಈಗಾಗಲೇ, ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹಿಂದೆ ಸರಿದಿದ್ದಾರೆ. ಪ್ರವೀಣ್ ಶೆಟ್ಟಿ ಬಣ ಕೂಡ ಬಂದ್‌ ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಓಲಾ-ಉಬರ್ ಅಸೋಸಿಯೇಷನ್‌ನಿಂದಲೂ ಇದುವರೆಗೆ ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಹೋಟೆಲ್ ಮಾಲೀಕರ ಸಂಘವೂ ಬಂದ್ ನಡೆಸುವುದರಿಂದ ಹಿಂದೆ ಸರಿಯುವ ಸಾಧ್ಯತೆ ಇದೆ. ಬಂದ್ ನಡೆಸುವುದರಿಂದ ವ್ಯಾಪಾರ-ವಹಿಟು ಸ್ಥಗಿತಗೊಳ್ಳುತ್ತಡೆ. ಇದರಿಂದ ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಹೊಡೆತ ಬೀಳುವುದಲ್ಲದೆ, ದಿನಗೂಲಿ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಿಗಳು ಹಾಗೂ ಹೋಟೆಲ್ ಉದ್ಯಮವನ್ನೇ ಅವಲಂಬಿಸಿರುವವರಿಗೆ ಸಮಸ್ಯೆಯಾಗಲಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಬಂದ್ ನಿರ್ಧಾರದಿಂದ ಹಲವು ಸಂಘಟನೆಗಳು ಹಿಂದೆ ಸರಿಯುತ್ತಿರುವುದರಿಂದ ಆಗಸ್ಟ್ 13ರ ಅಖಂಡ ಕರ್ನಾಟಕ ಬಂದ್ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಘೋಷಣೆಯಾಗಿಲ್ಲ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular