HomeKarnatakaBIG NEWS: ಕಾವೇರಿ ಹೋರಾಟದಲ್ಲಿ ಭಾಗಿಯಾದ ಶ್ವಾನ..... ಸ್ಟಾಲಿನ್ ಪ್ರತಿಕೃತಿ ಕಚ್ಚಿ ಆಕ್ರೋಶ

BIG NEWS: ಕಾವೇರಿ ಹೋರಾಟದಲ್ಲಿ ಭಾಗಿಯಾದ ಶ್ವಾನ….. ಸ್ಟಾಲಿನ್ ಪ್ರತಿಕೃತಿ ಕಚ್ಚಿ ಆಕ್ರೋಶ


ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕರದ ವಿರುದ್ಧ ಪ್ರತಿಭಟನೆ ಅಂಗವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳ ಹೋರಾಟ ಭುಗಿಲೆದ್ದಿದೆ.

ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಒಂದೆಡೆ ಟೈಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಕಾವೇರಿ ಹೋರಾಟದಲ್ಲಿ ಶ್ವಾನವೊಂದು ಭಾಗಿಯಾಗಿದೆ. ಕಾವೇರಿ ನೀರಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಶ್ವಾನವೊಂದು ಭಾಗಿಯಾಗಿ ಹೋರಾಟಕ್ಕೆ ಸಾಥ್ ನೀಡಿದೆ. ತಮಿಳುನಾಡು ಸಿಎಂ ಸ್ಟಾಲಿನ್ ಅವರ ಪ್ರತಿಕೃತಿ ಗೊಂಬೆಯನ್ನು ಬಾಯಿಯಲ್ಲಿ ಕಚ್ಚಿಕೊಂಡು ಪ್ರತಿಭಟನೆಯಲ್ಲಿ ಸಾಗುವ ಮೂಲಕ ಗಮನಸೆಳೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular