ಬೆಂಗಳೂರು: ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯದ ರೈತರ ಹಾಗೂ ಜನರ ಹಿತ ಕಾಯಲು ಸರ್ಕಾಅರ ಬದ್ಧವಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಕೈ ಬಿಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಆದಾಗ್ಯೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ಹಿಂಪಡೆಯಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಆಗಸ್ಟ್ 13ರಂದು ಕರ್ನಾಟಕ ಬಂದ್ ಮಾಡೇ ಮಾಡ್ತೀವಿ. ಬಂದ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಖಂಡ ಕರ್ನಾಟಕ ಬಂದ್ ಆಗಲಿದೆ ಎಂದು ತಿಳಿಸಿದ್ದಾರೆ.
ಸಿಎಂ ಡಿ.ಕೆ ಶಿವಕುಮಾರ್ ಕೂಡ ಬರಲಿ, ವೀಳ್ಯದೆಲೆ ನೀಡಿ ಅವರಿಗೆ ಸ್ವಾಗತಿಸುತ್ತೇವೆ. ಮಳೆ ಆಗಿದೆ ಅಂತಾ ತಮಿಳುನಾಡಿಗೆ ನೀರು ಬಿಡಬೇಡಿ. ನಮ್ಮ ನಾಲೆಗಳಿಗೆ ನೀರು ಹರಿಸಬೇಕು. ಕರ್ನಾಟಕ ಬಂದ್‌ನಿಂದ ಯಾರಿಗೂ ನಷ್ಟ ಆಗುವುದಿಲ್ಲ. ರಾಜ್ಯದ ಅಭಿವೃದ್ಧಿಗೆ ಒತ್ತಾಯಿಸಿ ಬಂದ್ ನಡೆಸುತ್ತೇವೆ ಎಂದು ಎಂದು ಸ್ಪಷ್ಟಪಡಿಸಿದರು.

