HomeLatest Newsಕಾವೇರಿ ನದಿ ವಿವಾದ: ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ: ವಾಟಾಳ್ ನಾಗರಾಜ್ ಎಚ್ಚರಿಕೆ

ಕಾವೇರಿ ನದಿ ವಿವಾದ: ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ: ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಆದೇಶವನ್ನೇ ಎತ್ತಿ ಹಿಡಿದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಪ್ರತಿದಿನ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ. ಈಗಾಗಲೇ CWRC ಆದೇಶದಿಂದ ಆಕ್ರೋಶಗೊಂಡಿದ್ದ ರೈತರು, ಕನ್ನಡ ಪರ ಸಂಘಟನೆಗಳು ಇದೀಗ CWMA ಆದೇಶ ಹೊರ ಬೀಳುತ್ತಿದ್ದಂತೆ ಸಿಡಿದೆದ್ದಿದ್ದು, ಉಗ್ರ ಹೋರಾಟಕ್ಕೆ ಮುಂದಾಗಿವೆ.

CWRC ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ,ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA) ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು ನವದೆಹಲಿಯಲ್ಲಿ ಪ್ರಾಧಿಕಾರ ನಡೆಸಿದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಪರ ಗೌರವ್ ಗುಪ್ತಾ ವಾದ ಮಂಡಿಸಿ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಕಾವೇರಿ ಕೊಳ್ಳದಲ್ಲಿ ನೀರಿಲ್ಲ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಆದಾಗ್ಯೂ ಪ್ರಾಧಿಕಾರ ಕರ್ನಾಟಕದ ವಾದ ನಿರಾಕರಿಸಿದ್ದು, CWRC ಆದೇಶವನ್ನು ಎತ್ತಿ ಹಿಡಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

CWMA ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಕಾವೇರಿ ಕೊಳ್ಳದ ಭಾಗದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಕನ್ನಡ ಪರ ಸಂಘಟನೆಗಳೂ ಹೋರಾಟಕ್ಕೆ ಕರೆ ಕೊಟ್ಟಿವೆ. ಆದೇಶದ ಬೆನ್ನಲ್ಲೇ ಮಾತನಾಡಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ನದಿ ನೀರು ವಿಚಾರದಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರಗಳ ಆದೇಶ ಸರಿಯಿಲ್ಲ. ರಾಜ್ಯದಲ್ಲಿ ಬರಗಾಲವಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ನೀರಿಲ್ಲ. ಇಲ್ಲಿನ ರೈತರು ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಪ್ರತಿ ದಿನ 3,500 ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ. ಈ ಆದೇಶಗಳ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ ಎಂದು ಗುಡುಗಿದ್ದಾರೆ.

ನಾಳೆ ರೈತರು ಹಾಗೂ ಕನ್ನಡಪರ ಸಂಘಟನೆಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಅಖಂಡ ಕರ್ನಾಟಕ ಬಂದ್ ಹೋರಾಟಕ್ಕೆ ನಿರ್ಧರಿಸಲಾಗುವುದು. ಇಡೀ ರಾಜ್ಯ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular