JOB OFFER: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ: ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸ್ತಿ ಹೊಂದಿದ್ದರೆ, ಕೆಲಸಕ್ಕಾಗಿ ಹುಡುಕಿತ್ತಿದ್ದವರಿಗೆ ಇಲ್ಲಿದೆ ಅವಕಾಶ. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಗ್ರಾಹಕ ಸೇವಾ ಸಹಾಯಕ ಹುದ್ದೆ, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಸ್ಥಳ ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯಲ್ಲಿ ಕೆಲಸ. ವೇತನ ಶ್ರೇಣಿ 24,050ರೂ-64,480 ರೂ.ರವರೆಗೆ ಇರಲಿದೆ.

ಯಾವುದೇ ವಿಷಯಗಳಲ್ಲಿ ಪದವಿ ಶಿಕ್ಷಣವನ್ನು ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಗಳು/ ಬೋರ್ಡ್ ಗಳಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 26 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಆನ್ ಲೈನ್ ಮೂಲಕ ನಡೆಯಲಿದ್ದು, ಪರೀಕ್ಷೆಗಳು ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ,ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಕಲಬುರ್ಗಿ ಜಿಲ್ಲೆಗಳಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನ.30,2024. ಪರೀಕ್ಷೆ ದಿನಾಂಕ ಡಿಸೆಂಬರ್ 15, 2024

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read