BIG NEWS: ಕರ್ನಾಟಕ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಕರ್ನಾಟಕ ಬ್ಯಾಂಕ್ ನ ವಿಟ್ಲ ಸಮೀಪದ ಅಡ್ಯನಡ್ಕ ಶಾಖೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ನಲ್ಲಿ ಕೋಟ್ಯಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ಬಂಟ್ವಾಳದ ಮಹಮ್ಮದ್ ರಫೀಕ್ (35), ಮಂಜೇಶ್ವರ ಇಬ್ರಾಹಿಂ ಕಲಂದರ್ (41), ಮಂಜೇಶ್ವರದ ದಯಾನಂದ್ ಎಸ್ (37) ಎಂಬ ಮೂವರನ್ನು ಬಂಧಿಸಲಾಗಿದೆ. ಸುಮಾರು 20 ವರ್ಷ ಹಳೆ ಕಟ್ಟಡದಲ್ಲಿ ಬ್ಯಾಂಕ್ ಶಾಖೆಯಿತ್ತು. ಅಲ್ಲದೇ ಬ್ಯಾಂಕ್ ಕಟ್ಟಡದ ಸುತ್ತ ಪೊದೆ ಇದ್ದ ಕಾರಣ ಕಳ್ಳರು ಕಿಟಕಿ ಮುರಿದು ಬ್ಯಾಂಕ್ ಗೆ ನುಗ್ಗಿ ಕಳುವು ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read