ಬೆಂಗಳೂರು: ಹವಾಮಾನ ಬದಲಾವಣೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲು ಶುರುವಾಗಿದ್ದರೆ ಮತ್ತೆ ಕೆಲ ಜಿಲ್ಲೆಗಳಲ್ಲಿ ಬಿಸಿಲ ಝಳದ ನಡುವೆಯೇ ವರುಣಾರ್ಭಟ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕೊಪ್ಪಳ, ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಲುರು, ಕೊಡಗು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನು ವಿಜಯನಗರ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಕಲಬುರಗಿ, ತುಮಕೂರು, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.