ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಬಿಸಿಲ ಝಳದ ವಾತಾವರಣವಿತ್ತು. ನಿನ್ನೆಯಿಂದ ಮೋಡಕವಿದ ವಾತಾರಣ, ಅಲ್ಲಲ್ಲಿ ಮಳೆಯಾಗುತ್ತುತ್ತು. ಇಂದು ಬೆಂಗಳೂರಿನ ಹಲವೆಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜಧಾನಿ ಜನತೆಗೆ ವರುಣ ತಂಪೆರೆದಂತಾಗಿದೆ.
ಬೆಂಗಳೂರಿನ ಶಾಂತಿನಗರ, ಕಬ್ಬನ್ ಪಾರ್ಕ್, ಲಾಲ್ ಬಾಗ್, ರಿಚ್ಮಂಡ್ ವೃತ್ತ, ಎಂ.ಜಿ.ರಸ್ತೆ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಜಯನಗರ, ಜೆಪಿ ನಗರ, ಆರ್ ಆರ್ ನಗರ, ಗಿರಿನಗರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯನಗರ, ದಾವಣಗೆರೆ ಜಿಲ್ಲೆಗಾಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯನಗರ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.