ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 2 ಹಾಗೂ 3ರಂದು ಭಾರಿ ಮಳೆಯಾಗಲಿದೆ. ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.