ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ವರುಣಾರ್ಭಟ ಜೋರಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ನಿನ್ನೆಧಾರಾಕಾರ ಮಳೆಯಾಗಿದೆ. ಇಂದು ಕೂಡ ಮಳೆಯಾಗಲಿದ್ದು, ಅಕ್ಟೋಬರ್ 12ರವರೆಗೂ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.