HomeKarnatakaBIG NEWS: ನವೆಂಬರ್ 13ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹಾವಾಮಾನ ಇಲಾಖೆ ಮುನ್ಸೂಚನೆ

BIG NEWS: ನವೆಂಬರ್ 13ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹಾವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 13 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಗದಗ, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನೆರಡು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಳ್ಳಲಿದ್ದು, ತಮುಳುನಾಡು, ಶ್ರೀಲಂಕಾ ಕಡೆ ಚಲಿಸಲಿದೆ. ಬೆಂಗಳೂರಿನಲ್ಲಿ ಸದ್ಯ ಶುಭ್ರ ವಾತಾವರಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular