HomeLatest NewsWeather Report: ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: 14 ಡಿಗ್ರಿಗಿಳಿದ ತಾಪಮಾನ

Weather Report: ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: 14 ಡಿಗ್ರಿಗಿಳಿದ ತಾಪಮಾನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಚಳಿಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಶೀತಗಾಳಿ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಶೀತಗಾಳಿ, ಚಳಿ ಹೆಚ್ಚಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ ಮೈ ಕೊರೆವ ಚಳಿ ಜೊತೆಗೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗಾಳಿ, ಮೈ ಕೊರೆವ ಚಳಿ ಪ್ರಮಾಣ ಹೆಚ್ಚಿದ್ದು, ತಾಪಮಾನ 14 ಡಿಗ್ರಿಗೆ ಕುಸಿದಿದೆ. ಜನರು ಬೆಚ್ಚನೆಯ ಉಡುಪು ಧರಿಸುವಂತೆ ಹಾಗೂ ಸಮತೋಲಿತ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೀತದ ಜೊತೆಗೆ ಒಣಹವೆ ಇರಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.

ಮೈಸೂರು, ಚಾಮರಾಜನಗರ,ಕೊಡಗು, ಹಾಸನ, ದಾವಣಗೆರೆ, ಮಂಡ್ಯ, ರಾಮನಗರ, ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular