ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ, ತ್ರಯಂಬಕೇಶ್ವರ ದೇವಾಲಯಕ್ಕೆ ಯಾತ್ರೆ; ರಾಜ್ಯ ಸರ್ಕಾರದ ಹೊಸ ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ – ಭಾರತ್‌ ಗೌರವ್ ದ್ವಾರಕಾ ಯಾತ್ರೆ ಎಂಬ ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.

ಈ ಪ್ಯಾಕೇಜ್‌ಗೆ ಒಟ್ಟು 30,000 ರೂಪಾಯಿ ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು 15,000 ರೂ. ಮೊತ್ತವನ್ನು ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ 15,000 ರೂ. ಮಾತ್ರ ಪಾವತಿಸಬೇಕಾಗುತ್ತದೆ.

ಪ್ರವರ್ಗ ʼಸಿʼ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು / ನೌಕರರು ಭಾರತ್‌ ಗೌರವ್‌ ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆಪ್ಟೆಂಬರ್‌ 20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.

ಬುಕ್ಕಿಂಗ್‌ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic&sector=All&bdar=6 ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611, 8595931293, 8595931291 ಗೆ ಕರೆ ಮಾಡಿ ಟಿಕೆಟ್‌ ಬುಕ್‌ ಮಾಡಿಕೊಳ್ಳಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read