HomeLatest NewsBIG NEWS : 'ಧಾರ್ಮಿಕ ದತ್ತಿ ಇಲಾಖೆ'ಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ,...

BIG NEWS : ‘ಧಾರ್ಮಿಕ ದತ್ತಿ ಇಲಾಖೆ’ಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ, ಇಲ್ಲಿದೆ ಮಾಹಿತಿ.!

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ.

ಈ ಪ್ಯಾಕೇಜ್ಗೆ ಒಟ್ಟು ₹15,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹5,000 ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗುತ್ತದೆ.

3 ಟೈರ್ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಪ್ರತಿ ಕೋಚ್ಗೆ ಪ್ರವಾಸ ಮಾರ್ಗದರ್ಶಕರು, ರೈಲಿನಲ್ಲಿ ಭದ್ರತಾ ವ್ಯವಸ್ಥೆ ಇರುತ್ತದೆ. ಟಿಕೆಟ್ ಬುಕ್ಕಿಂಗ್ಗಾಗಿ https://www.irctctourism.com/ ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ 9363488229 ಗೆ ಕರೆ ಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular