HomeKarnatakaಜಿಬಿಎ ಚುನಾವಣೆ: ಶಿಷ್ಯರಿಗೆ ಟಿಕೆಟ್ ಕೊಡಿಸುವ ಉತ್ಸಾಹದಲ್ಲಿದ್ದ ಬಿಜೆಪಿ ಶಾಸಕರಿಗೆ ಹೈಕಮಾಂಡ್ ಶಾಕ್!

ಜಿಬಿಎ ಚುನಾವಣೆ: ಶಿಷ್ಯರಿಗೆ ಟಿಕೆಟ್ ಕೊಡಿಸುವ ಉತ್ಸಾಹದಲ್ಲಿದ್ದ ಬಿಜೆಪಿ ಶಾಸಕರಿಗೆ ಹೈಕಮಾಂಡ್ ಶಾಕ್!

ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಅದರಲ್ಲೂ ಮುಂಬೈ ಮಹಾನಗರ ಪಾಲಿಕೆ, ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಕರ್ನಾಟಕದ ರಾಜಧಾನಿ ಮೇಲೆ ಬಿಜೆಪಿ ಹೈಕಮಾಂಡ್ ಕಣ್ಣು ನೆಟ್ಟಿದೆ.

ಹೈಕಮಾಂಡ್ ಜಿಬಿಎ ಚುನಾವಣೆಗೆ ಉಸ್ತುವಾರಿಯಾಗಿ ರಾಮ್ ಮಾಧವ್ ನೇಮಕ ಮಾಡಿದೆ. ಸಹ-ಉಸ್ತುವಾರಿಗಳು ಸತೀಶ್ ಪೂನಿಯಾ ಮತ್ತು ಸಂಜಯ್ ಉಪಾಧ್ಯಾಯ. ಕಳೆದ ವಾರ ಮೂವರು ಸಹ ಬೆಂಗಳೂರು ನಗರಕ್ಕೆ ಆಗಮಿಸಿದ್ದರು ರಾಜ್ಯದ ಪಕ್ಷದ ನಾಯಕರ ಜೊತೆ ಸಭೆ ನಡೆಸಿದರು.

ಜಿಬಿಎ ಚುನಾವಣೆ ಕುರಿತು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಂತಾದವರು ಪಾಲ್ಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕರಿಗೆ ದೊಡ್ಡ ಟಾಸ್ಕ್: 198 ವಾರ್ಡ್‌ಗಳ ಬಿಬಿಎಂಪಿ ಈಗ 369 ವಾರ್ಡ್‌ಗಳನ್ನು ಹೊಂದಿರುವ ಜಿಬಿಎ ಆಗಿದೆ. 5 ನಗರ ಪಾಲಿಕೆಗಳು ಬರುತ್ತವೆ. ಈ ಚುನಾವಣೆಯು ಕರ್ನಾಟಕ ವಿಧಾನಸಭೆ ಚುನಾವಣೆಯ ಮಟ್ಟಿಗೆ ರಾಜ್ಯದ ಗಮನ ಸೆಳೆಯಲಿದೆ. ರಾಜಕೀಯ ಪಕ್ಷಗಳ ಪ್ರತಿಷ್ಠೆಗೆ ಕಾರಣವಾಗಲಿದೆ.

ಜಿಬಿಎ ಚುನಾವಣೆ ಉಸ್ತುವಾರಿ ರಾಮ್ ಮಾಧವ್ ಸಭೆಯಲ್ಲಿ ಬೆಂಗಳೂರು ನಗರದ ಬಿಜೆಪಿ ಶಾಸಕರಿಗೆ ದೊಡ್ಡ ಟಾಸ್ಕ್ ನೀಡಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 12-15 ವಾರ್ಡ್ ಬರುತ್ತದೆ. ಪ್ರತಿವಾರ್ಡ್‌ಗೆ 3 ಸಂಭಾವ್ಯ ಅಭ್ಯರ್ಥಿಗಳನ್ನು ಶಾಸಕರು ಸೂಚಿಸಬೇಕಿದೆ. ಕೇವಲ ತಮ್ಮ ಶಿಷ್ಯವರ್ಗವನ್ನು ಅಭ್ಯರ್ಥಿಯಾಗಿ ಮಾಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಲಾಗಿದೆ.

ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಬಹಿರಂಗ ಸತ್ಯವಾಗಿದೆ. ಬೆಂಗಳೂರು ನಗರದ ಮೇಲೆ ಅಪಾರವಾದ ಹಿಡಿತವಿದ್ದ ವಿ.ಸೋಮಣ್ಣ ಕೇಂದ್ರ ಸಚಿವರು, ಆರ್.ಅಶೋಕ ವಿರೋಧ ಪಕ್ಷದ ನಾಯಕರು. ಈ ನಡುವೆ ರಾಜ್ಯ ಘಟಕದ ಅಸಮಾಧಾನವನ್ನು ಜೊತೆಗೆ ಇಟ್ಟುಕೊಂಡು ಜಿಬಿಎ ಚುನಾವಣೆಯನ್ನು ಬಿಜೆಪಿ ಎದುರಿಸಬೇಕಿದೆ.

ಆದ್ದರಿಂದಲೇ ಬಿಜೆಪಿ ಒಬ್ಬರು ಉಸ್ತುವಾರಿ, ಇಬ್ಬರು ಸಹ ಉಸ್ತುವಾರಿಯನ್ನು ನೇಮಕ ಮಾಡಿದೆ. ಕೇವಲ ಕರ್ನಾಟಕದ ನಾಯಕರನ್ನು ನಂಬಿಕೊಂಡು ಕುಳಿತರೆ ಆಗುವುದಿಲ್ಲ ಎಂಬುದು ಅವರಿಗೂ ತಿಳಿದಿದೆ.

ಶಾಸಕರು ಪ್ರತಿ ವಾರ್ಡ್‌ಗೆ 3 ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಬೇಕು. ಪ್ರಚಾರ, ಅಭ್ಯರ್ಥಿ ಅಂತಿಮಗೊಳಿಸುವುದು ಸೇರಿದಂತೆ ಇತರೆ ಎಲ್ಲಾ ವಿಚಾರದಲ್ಲಿ ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದು ರಾಜ್ಯ ನಾಯಕರಿಗೆ ಸಭೆಯಲ್ಲಿ ಸೂಚಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರವಹಿಸಿಕೊಂಡ ಮೇಲೆ ಪಕ್ಷದ ಕಾರ್ಯ ವೈಖರಿ ಬದಲಾಗಿದೆ. ಜಿಬಿಎ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಮಾರ್ಚ್ ಅಂತ್ಯದೊಳಗೆ ಶಾಸಕರು, ಪಕ್ಷದ ನಾಯಕರು ಪ್ರತಿ ವಾರ್ಡ್‌ಗೆ 3 ಸಂಭಾವ್ಯ ಅಭ್ಯರ್ಥಿಗಳನ್ನು ಸೂಚಿಸಿ ಎಂದು ರಾಮ್ ಮಾಧವ್ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಬೆಂಗಳೂರು ನಗರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ಆಡಳಿತ ವಿರೋಧಿ ಅಲೆ ಇದೆ. ರಸ್ತೆ ಗುಂಡಿ ಮುಚ್ಚಲು ಆಗದ ಇವರು ಸುರಂಗ ರಸ್ತೆ ನಿರ್ಮಾಣದ ಬಗ್ಗೆ ಮತನಾಡುತ್ತಿದ್ದಾರೆ”ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಕರ್ನಾಟಕದಲ್ಲಿ ಮೈತ್ರಿ ಪಕ್ಷಗಳು. ಆದರೆ ಜಿಬಿಎ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆಯೇ? ಎಂಬುದು ಇನ್ನೂ ಅಂತಿಮವಾಗಿಲ್ಲ. 369 ವಾರ್ಡ್‌ಗಳ ಸೀಟು ಹಂಚಿಕೆ ಕಗ್ಗಂಟಾಗುವ ನಿರೀಕ್ಷೆ ಇದ್ದು, ಎರಡೂ ಪಕ್ಷಗಳು ಏಕಾಂಗಿಯಾಗಿ ಚುನಾವಣೆ ಎದುರಿಸುವ ನಿರೀಕ್ಷೆ ಇದೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಜೂನ್ 30ರೊಳಗೆ ಜಿಬಿಎ ಚುನಾವಣೆಯನ್ನು ಸರ್ಕಾರ ನಡೆಸಬೇಕಿದೆ. ಕಾಂಗ್ರೆಸ್ ಪಕ್ಷ ಸಹ ಈಗಾಗಲೇ ಇದಕ್ಕಾಗಿ ತಯಾರಿ ಆರಂಭಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ ಮಾಡಲು ಅರ್ಜಿಯನ್ನು ಬಿಡುಗಡೆ ಮಾಡಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular