HomeKarnatakaಬಿ.ವೈ.ವಿಜಯೇಂದ್ರ ಮುಂದೆ ಕರಗಿದ ಮುನಿಸು, ಅಸಮಾಧಾನಗೊಂಡಿದ್ದ ನಾಯಕನಿಗೆ ಸಿಹಿ!

ಬಿ.ವೈ.ವಿಜಯೇಂದ್ರ ಮುಂದೆ ಕರಗಿದ ಮುನಿಸು, ಅಸಮಾಧಾನಗೊಂಡಿದ್ದ ನಾಯಕನಿಗೆ ಸಿಹಿ!

ವಿಧಾನ ಪರಿಷತ್ ಚುನಾವಣೆಗೆ ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ದೊರೆಯದ ಕಾರಣ ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ನಡೆಸಿದ ಸಂಧಾನ ಸಭೆ ಫಲಕೊಟ್ಟಿದೆ. ಬಿ.ವೈ.ವಿಜಯೇಂದ್ರ ಲಿಂಗರಾಜ ಪಾಟೀಲ ಅವರಿಗೆ ಸಿಹಿ ತಿನ್ನಿಸಿ ಮನವೊಲಿಸಿದ್ದಾರೆ.

ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಗೂ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷರಾಗಿದ್ದ ಲಿಂಗರಾಜ ಪಾಟೀಲ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ ಲಿಂಗರಾಜ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಸಂಜೆ ನಡೆದ ಕಾರ್ಯಕ್ರಮವೊಂದರಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿಹಿ ತಿನ್ನಿಸುವ ಮೂಲಕ ಲಿಂಗರಾಜ ಪಾಟೀಲ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಮುಂದುವರಿಯುವ ಸಂಕಲ್ಪವನ್ನು ವ್ಯಕ್ತಪಡಿಸಲಾಗಿದೆ. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಗೌರವಿಸುತ್ತಾ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕಾರ್ಯ ನಡೆಯಲಿದೆ.

ಬಿಜೆಪಿ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ನೀಡಿತ್ತು. ಆದರೆ ಲಿಂಗರಾಜ ಪಾಟೀಲ ಪ್ರಬಲ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈತಪ್ಪಿದ ಬಳಿಕ ರಾಜೀನಾಮೆ ನೀಡಿದ್ದರು.

ಲಿಂಗರಾಜ ಪಾಟೀಲ ರಾಜೀನಾಮೆ: ಬಿ.ವೈ.ವಿಜಯೇಂದ್ರಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದ ಲಿಂಗರಾಜ ಪಾಟೀಲ ಪತ್ರದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜೀನಾಮೆ ಸಲ್ಲಿಸುವ ಕುರಿತು ಎಂದು ವಿಷಯ ಪ್ರಸ್ತಾಪಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ, ನಾನು ಲಿಂಗರಾಜ ಪಾಟೀಲ ಕಳೆದ 37 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ನೀಡಿದ ಪ್ರತಿಯೊಂದು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಪಕ್ಷದ ಬೆಳವಣಿಗೆಗೆ ನನ್ನದೇ ಆದ ಕೊಡುಗೆ ನೀಡಿದ್ದೇನೆ. ನನ್ನ ಪಕ್ಷದ ಸೇವೆಗೆ ರಾಜ್ಯದ ಅನೇಕ ಕಾರ್ಯಕರ್ತರು ಸಾಕ್ಷಿಯಾಗಿದ್ದಾರೆ.

ನನ್ನ ಈ ದೀರ್ಘಕಾಲದ ಸೇವೆಯನ್ನು ಪರಿಗಣಿಸಿ, ಪಕ್ಷವು ನನಗೆ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಲು ಒಂದು ಅವಕಾಶವನ್ನು ಖಂಡಿತವಾಗಿ ನೀಡುತ್ತದೆ ಎಂಬ ವಿಶ್ವಾಸ ನನ್ನಲ್ಲಿತ್ತು. ಆದರೆ, ಕಳೆದ ಹಲವು ವರ್ಷಗಳಿಂದ ನಾನು ಸಲ್ಲಿಸಿರುವ ಪ್ರಾಮಾಣಿಕ ಸೇವೆಯನ್ನು ಪರಿಗಣಿಸದೇ ಇರುವುದು ನನಗೆ ಮಾತ್ರವಲ್ಲದೆ, ರಾಜ್ಯದ ಎಲ್ಲಾ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಹಾಗೂ ನೋವುಂಟು ಮಾಡಿದ ಸಂಗತಿಯಾಗಿದೆ.

ಆದ್ದರಿಂದ, ನಾನು ಪ್ರಸ್ತುತ ವಹಿಸಿರುವ ರಾಜ್ಯ ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಅಂಗೀಕರಿಸಲು ವಿನಂತಿಸುತ್ತೇನೆ. ಇಲ್ಲಿವರೆಗೆ ತಾವು ನೀಡಿದ ಸಹಕಾರಕ್ಕೆ ಹೃತ್ತೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular