ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನೇರವಾಗಿ ಸಾಲ-ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ (ರೂ.20,000 ಸಬ್ಸಿಡಿ) ಹಾಗೂ ಗರಿಷ್ಠ ರೂ.2 ಲಕ್ಷಗಳ (ರೂ.40,000 ಸಬ್ಸಿಡಿ) ಆರ್ಥಿಕ ನೆರವು ಒದಗಿಸಲಾಗುತ್ತದೆ.
ಆಸಕ್ತರು ಅಕ್ಟೋಬರ್ 31, 2025 ರೊಳಗಾಗಿ ವೆಬ್ ಸೈಟ್ ksbdb.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.