ಬೆಂಗಳೂರು: ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ನಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ವಿಶೇಷವಾಗಿ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕುವ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳಿಗೆ ಸಿಕ್ಕ ಸಮಾಧಾನಕರ ಸುದ್ದಿಗಳು
RTE ವಿದ್ಯಾರ್ಥಿಗಳಿಗೆ ಆಸರೆ: ಆರ್‌ಟಿಇ (RTE) ಅಡಿ ಪ್ರವೇಶ ಪಡೆದ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳು ತಮ್ಮ 9 ಮತ್ತು 10ನೇ ತರಗತಿ ಶಿಕ್ಷಣವನ್ನು ಅಡೆತಡೆಯಿಲ್ಲದೆ ಮುಂದುವರಿಸಲು ₹19 ಕೋಟಿ ಅನುದಾನ ಮೀಸಲಿಡಲಾಗಿದೆ.
ವಸತಿ ಶಾಲೆಗಳ ಕ್ರಾಂತಿ: ಪದವಿ ಪೂರ್ವ ಶಿಕ್ಷಣಕ್ಕೆ ಅನುಕೂಲವಾಗುವಂತೆ ರಾಜ್ಯದ 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು. ಅಷ್ಟೇ ಅಲ್ಲದೆ, ಈವರೆಗೆ ವಸತಿ ಶಾಲೆಗಳೇ ಇಲ್ಲದ ಹೋಬಳಿಗಳಲ್ಲಿ 40 ಹೊಸ ವಸತಿ ಶಾಲೆಗಳನ್ನು ಆರಂಭಿಸಲು ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ನೀಟ್/ಸಿಇಟಿ ತರಬೇತಿಗೆ ಒತ್ತು: ಕ್ರೈಸ್ತ ವಸತಿ ನಿಲಯಗಳನ್ನು Center of Excellence ಗಳನ್ನಾಗಿ ಪರಿವರ್ತಿಸಿ, ಅಲ್ಲಿ K-CET JEE ಮತ್ತು NEET ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ.

