HomeKarnatakaಕರ್ನಾಟಕ ಬಜೆಟ್ 2026: ಸಾರಿಗೆ ಇಲಾಖೆ ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸಾರಿಗೆ ಇಲಾಖೆ ನಿರೀಕ್ಷೆಗಳು

ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026 ಪೂರ್ವ ತಯಾರಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

ಕರ್ನಾಟಕ ಸರ್ಕಾರ ತನ್ನ ಮಹತ್ವದ ‘ಶಕ್ತಿ’ ಯೋಜನೆಗೆ ಅನುದಾನ ನೀಡುವ ಜೊತೆಗೆ ಸಾರಿಗೆ ಇಲಾಖೆಯ ಇತರ ಅಂಶಗಳತ್ತಲೂ ಗಮನ ಹರಿಸಬೇಕಿದೆ. ನೇಮಕಾತಿ, ಹೊಸ ಬಸ್ ಖರೀದಿ, ಹೊಸ ಬಸ್ ನಿಲ್ದಾಣಗಳ ನಿರ್ಮಾಣದತ್ತಲೂ ಬಜೆಟ್‌ನಲ್ಲಿ ಚಿತ್ತ ಹರಿಸಲಿದೆ.

ಹಾಗಾದರೆ ಈ ಬಾರಿಯ ಬಜೆಟ್‌ನಲ್ಲಿ ಸಾರಿಗೆ ಇಲಾಖೆ ನಿರೀಕ್ಷೆಗಳೇನು?. ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು. ಬಳಿಕ ಅವರು ಈ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರಿಗೆ ಇಲಾಖೆ ನಿರೀಕ್ಷೆಗಳು: ಈ ಕಾರ್ಯಕ್ರಮದಲ್ಲಿಯೇ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಜೆಟ್‌ನಲ್ಲಿ ಸಾರಿಗೆ ಇಲಾಖೆ ನಿರೀಕ್ಷೆಗಳೇನು? ಎಂದು ಮಾತನಾಡಿದ್ದಾರೆ.

ಸಚಿವರು ಮಾತನಾಡಿ, “ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ 670 ಕೋಟಿಗೂ ಹೆಚ್ಚು ಮಹಿಳೆಯರು ಬಸ್ ಸಂಚಾರ ಮಾಡಿದ್ದಾರೆ. ಇದು ದಾಖಲೆ” ಎಂದು ತಿಳಿಸಿದರು.

“ಸರ್ಕಾರ 10 ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ನೇಮಕಾತಿ ಮಾಡಿದ್ದು, ಇದರಲ್ಲಿ 9 ಸಾವಿರ ಮಂದಿ ನಿರ್ವಾಹಕರು ಮತ್ತು ಚಾಲಕರನ್ನು ನೇರ ನೇಮಕಾತಿ ಮಾಡಲಾಗಿದೆ. ಒಂದು ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ಅನುಕಂಪದ ಆಧಾರದ ಮೇಲೆ ಅರ್ಹರನ್ನು ನೇಮಿಸಲಾಗಿದೆ” ಎಂದು ವಿವರಿಸಿದರು.

“ರಾಜ್ಯದಲ್ಲಿ ಈ ಹಿಂದೆ 5,800 ಬಸ್‍ಗಳು ಹಾಗೂ ಪ್ರಸಕ್ತ ವರ್ಷ 2 ಸಾವಿರ ಬಸ್ಸುಗಳು ಒಟ್ಟು 7,800 ಕೆಎಸ್‍ಆರ್‌ಟಿಸಿ ಬಸ್‍ಗಳು ಸಂಚರಿಸುತ್ತವೆ. ಪ್ರತೀ ವರ್ಷ ಕಾಲಾನು ಕಾಲಕ್ಕೆ ಹೊಸ ಬಸ್‍ಗಳನ್ನು ಖರೀದಿಸಿ, ಬಸ್ಸು ಓಡಾಟಕ್ಕೆ ಅವಕಾಶ ಮಾಡಲಾಗಿದೆ” ಎಂದರು.

“ಬರುವ ಬಜೆಟಿನಲ್ಲಿ ಸಾರಿಗೆ ಸಂಪರ್ಕಕ್ಕೆ ಇನ್ನಷ್ಟು ಹೆಚ್ಚಿನ ಒತ್ತು ನೀಡಲಾಗಿದ್ದು, ಜಿಲ್ಲೆಗೂ ಸಹ ಸಾರಿಗೆ ಇಲಾಖೆಯಲ್ಲಿ ಆಗಬೇಕಿರುವ ಕೆಲಸಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕೊಡಗು ಜಿಲ್ಲೆಗೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಲಾಗುವುದು” ಎಂದು ಸಚಿವರು ಭರವಸೆ ನೀಡಿದರು.

“ಈಗಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಶನಿವಾರಸಂತೆಯಲ್ಲಿ 10.5 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಲಾಗಿದೆ.  ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ ಕಾರ್ಯಪ್ಪ ಅವರ ಹೆಸರಿಡಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಕ್ಯಾಬಿನೆಟ್ ಅನುಮೋದನೆ ಪಡೆಯಲಾಗುವುದು” ಎಂದು ಸಚಿವರು ಹೇಳಿದರು.

ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ, “ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಿರಿಯರೊಬ್ಬರು ಶನಿವಾರಸಂತೆಯಲ್ಲಿ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಮನವಿ ಮಾಡಿದ ಹಿನ್ನೆಲೆ, ಆ ಸಂದರ್ಭದಲ್ಲಿ ಭರವಸೆ ನೀಡಲಾಗಿತ್ತು. ಎಲ್ಲರ ಆಶೀರ್ವಾದದಿಂದ ಜಯ ಗಳಿಸಿದ ನಂತರ ಅಂದಿನ ಜಿಲ್ಲಾಧಿಕಾರಿ ಆಗಿದ್ದ ಡಾ.ಬಿ.ಸಿ.ಸತೀಶ ಅವರು ಜಾಗ ಗುರುತಿಸಿದ್ದರು. ಅದರಂತೆ ಮಾನ್ಯ ಸಾರಿಗೆ ಸಚಿವರಲ್ಲಿ ಮನವಿ ಮಾಡಿದಾಗ ತಕ್ಷಣವೇ 10.5 ಲಕ್ಷ ರೂ ಅನುದಾನ ಬಿಡುಗಡೆ ಮಾಡಿ, ಭೂಮಿ ಪೂಜೆ ನೆರವೇರಿಸಲಾಗಿತ್ತು. ಅದರಂತೆ ಒಂದು ವರ್ಷದಲ್ಲಿಯೇ ನಿರ್ಮಾಣ ಮಾಡಲಾಗಿರುವುದು ವಿಶೇಷ” ಎಂದರು.

“ಕೊಡಗು ಜಿಲ್ಲೆಗೆ ಪ್ರತ್ಯೇಕ ಕೆಎಸ್‍ಆರ್‌ಟಿಸಿ ವಿಭಾಗೀಯ ಕಚೇರಿ ಆರಂಭಿಸಬೇಕು. ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್‍ಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ಚಾಲಕರು ಮತ್ತು ನಿರ್ವಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸುವಂತಾಗಬೇಕು. ಈಗಾಗಲೇ ಕೆಎಸ್‍ಆರ್‌ಟಿಸಿ ಬಸ್‍ಗಳಿಗೆ ಕೆಎ12 ನಂಬರ್ ನೋಂದಣಿ ಸಂಖ್ಯೆಯನ್ನು ಸಚಿವರು ಕೊಡಿಸಿದ್ದಾರೆ” ಎಂದು ಶಾಸಕರು ಕೃತಜ್ಞತೆ ಸಲ್ಲಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular