HomeLatest Newsನಿರುದ್ಯೋಗಿಗಳಿಗೆ ಸಿದ್ದು ಬಂಪರ್ ಕೊಡುಗೆ: 56 ಸಾವಿರ ಹುದ್ದೆಗಳ ಭರ್ತಿಗೆ ಘೋಷಣೆ: ವಯೋಮಿತಿಯಲ್ಲೂ 5 ವರ್ಷ...

ನಿರುದ್ಯೋಗಿಗಳಿಗೆ ಸಿದ್ದು ಬಂಪರ್ ಕೊಡುಗೆ: 56 ಸಾವಿರ ಹುದ್ದೆಗಳ ಭರ್ತಿಗೆ ಘೋಷಣೆ: ವಯೋಮಿತಿಯಲ್ಲೂ 5 ವರ್ಷ ಸಡಿಲಿಕೆ

ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್‌ನಲ್ಲಿ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ.

ಬೃಹತ್ ನೇಮಕಾತಿ: ಈ ವರ್ಷ ಒಟ್ಟು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ವಯೋಮಿತಿಯಲ್ಲಿ ಸಡಿಲಿಕೆ: ನೇಮಕಾತಿ ಪ್ರಕ್ರಿಯೆಯಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಗಮನಿಸಿ, ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಡಳಿತ ಬಲವರ್ಧನೆ: ಪ್ರಮುಖ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಕೆಲಸದ ವೇಗವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.

ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಸಿಎಂ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular