HomeKarnatakaBREAKING NEWS: ವಿಧಾನಸಭೆ ಕಲಾಪ ಮತ್ತೊಂದು ದಿನ ವಿಸ್ತರಣೆ

BREAKING NEWS: ವಿಧಾನಸಭೆ ಕಲಾಪ ಮತ್ತೊಂದು ದಿನ ವಿಸ್ತರಣೆ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಕಲಾಪ ಪುನರಾರಂಭವಾದಾಗಲೂ ಬಿಜೆಪಿ ಸದಸ್ಯರು ಗದ್ದಲ-ಕೋಲಾಹಲ ಮುಂದುವರೆಸಿದರು.

ವಿಧಾನಸಭೆ ಕಲಾಪ ಪುನರಾರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಮತ್ತೆ ಪ್ರತಿಭಟನೆ ಮುಂದುವರೆಸಿದ್ದಾರೆ. ಸದನದ ಬಾವಿಗಿಳಿದು, ಸ್ಪೀಕರ್ ಪೀಠದ ಎದುರು ಕಾಗದಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು.

ಸದನದಲ್ಲಿ ಗದ್ದಲ ತೀವ್ರಗೊಳ್ಳುತ್ತಿದ್ದಂತೆ ಸ್ಪೀಕರ್ ಯು.ಟಿ.ಖಾದರ್ ಕಲಾಪವನ್ನು ನಾಳೆ ಬೆಳಿಗ್ಗೆ 9ಗಂಟೆಗೆ ಮುಂದೂಡಿದರು. ಈ ಮೂಲಕ ವಿಧಾನಸಭಾ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗದಿಯಂತೆ ಇಂದು ವಿಧಾನಮಂಡಲ ಅಧಿವೇಶನ ಮುಕ್ತಾಯವಾಗಬೇಕಿತ್ತು. ಆದರೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ ಉಭಯಸದನಗಳಲ್ಲಿ ಪ್ರತಿಧ್ವನಿಸಿದ್ದು, ಯಾವುದೇ ಕಲಾಪಕ್ಕೆ ಅವಕಾಶ ಸಿಗದ ಕಾರಣಕ್ಕೆ ಮತ್ತೆ ಒಂದು ದಿನ ಕಲಾಪ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular