HomeKarnatakaBUDGET BREAKING: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್; ವಿಶೇಷ ಚೇತನರಿಗೆ ದ್ವಿಚಕ್ರವಾಹನ; ಸಿಎಂ ಘೋಷಣೆ

BUDGET BREAKING: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್; ವಿಶೇಷ ಚೇತನರಿಗೆ ದ್ವಿಚಕ್ರವಾಹನ; ಸಿಎಂ ಘೋಷಣೆ

 ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಇನ್ಮುಂದೆ ಸ್ಮಾರ್ಟ್ ಫೋನ್ ನೀಡಲಾಗುತ್ತಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

100 ಕೋಟಿ ವೆಚ್ಚದಲ್ಲಿ 1000 ಅಂಗನವಾಡಿ ಕಟ್ಟಡ ನಿರ್ಮಾಣ ಮಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆಗಾಗಿ 4 ಕೇಂದ್ರಗಳನ್ನು ಸ್ಥಾಪಿಸಲಾಗುವುದು. ನಾಲ್ಕು ಅನುಪಾಲನಾ ಕೇಂದ್ರಗಳ ಸ್ಥಾಪನೆಗೆ 2 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. 1500 ವಿಶೇಷ ಚೇತನರಿಗೆ ದ್ವಿಚಕ್ರವಾಹನ ವಿತರಣೆ ಮಾಡಲಾಗುವುದು ಎಂದು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular