ಬೆಂಗಳೂರು-ರಾಜ್ಯದಲ್ಲಿ ಹಲವು ದಿನಗಳಿಂದ ನನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಈ ಹಿಂದೆ ನಿಗದಿಯಾಗಿದ್ದ ರಾಜಕೀಯ ಬೆಳವಣಿಗೆಗಳು ಮತ್ತು ನೀಟ್ (NEET) ಪ್ರತಿಭಟನಾ ಹೋರಾಟಗಳ ಕಾರಣದಿಂದ ಮುಂದೂಡಲ್ಪಟ್ಟಿದ್ದ ಸಂಪುಟ ವಿಸ್ತರಣೆಗೆ ಈಗ ಕಾಲ ಕೂಡಿಬಂದಿದೆ.
ಇಂದು ಸಂಜೆ ನವದೆಹಲಿಯ ಕರ್ನಾಟಕ ಭವನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಮತ್ತು ಸಂಸದರ ಜೊತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು,ಮಹತ್ವದ ಸಭೆ ನಡೆಸಲಿದ್ದಾರೆ.
ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ
ಹೈಕಮಾಂಡ್ ನಾಯಕರೊಂದಿಗೆ ಚರ್ಚೆ
ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಚರ್ಚಿಸಿ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಬುಧವಾರ ಅಥವಾ ಗುರುವಾರದೊಳಗೆ ಸಂಪುಟ ವಿಸ್ತರಣೆ ಅಥವಾ ಹೊಸ ಸಚಿವರ ಸೇರ್ಪಡೆ ನಡೆಯಬಹುದು ಎಂದು ಪಕ್ಷದ ಮೂಲಗಳು
ತಿಳಿಸಿವೆ..
ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಹಿರಿಯ ಶಾಸಕರ ಜತೆಗೆ ಯುವ ಮುಖಗಳು ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಕುರಿತು ರಾಹುಲ್ ಗಾಂಧಿ ಹಾಗೂ ಪಕ್ಷದ ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಯಾಗಲಿದೆ.
ಮುಂಬರುವ ವಿಧಾನಸಭೆ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಿ, ಹೊಸ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಸರ್ಕಾರ ಉತ್ಸುಕವಾಗಿದೆ.
ಸಚಿವ ಸ್ಥಾನಾಕಾಂಕ್ಷಿಗಳ ಲಾಬಿ ಹಾಗೂ ಸಾಮಾಜಿಕ-ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಂಡು ಹೈಕಮಾಂಡ್ ಅಂತಿಮ ಪಟ್ಟಿಗೆ ಹಸಿರು ನಿಶಾನೆ ತೋರಲಿದೆ.
ನೀಟ್ ಹೋರಾಟದಿಂದ ವಿಳಂಬ, ಈಗ ದಾರಿ ಸುಗಮ
ಕಳೆದ ವಾರ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರೆ ರಾಷ್ಟ್ರೀಯ ವಿಷಯಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ಬೃಹತ್ ಹೋರಾಟ ಮತ್ತು ಸಂಸತ್ ಚಟುವಟಿಕೆಗಳು ಏರ್ಪಟ್ಟಿದ್ದವು. ಈ ಅನಿವಾರ್ಯ ಕಾರಣದಿಂದಾಗಿ ರಾಜ್ಯದ ನಾಯಕರು ದೆಹಲಿಗೆ ತೆರಳಿದ್ದರೂ ಹೈಕಮಾಂಡ್ ಭೇಟಿ ಹಾಗೂ ಸಂಪುಟ ಚರ್ಚೆ ಸಾಧ್ಯವಾಗಿರಲಿಲ್ಲ. ಪರಿಣಾಮ, ಸಿಎಂ ಸೇರಿದಂತೆ ಪ್ರಮುಖ ನಾಯಕರು ವಾಪಸಾಗಬೇಕಾಗಿ ಬಂದಿತ್ತು.
ಸದ್ಯ ಆ ರಾಷ್ಟ್ರೀಯ ಕಾರ್ಯಕ್ರಮಗಳು ಮುಕ್ತಾಯಗೊಂಡಿರುವುದರಿಂದ, ದೆಹಲಿ ವಲಯದಿಂದ ಸಂಪುಟ ವಿಸ್ತರಣೆಗೆ ಯಾವುದೇ ತಡೆ ಇಲ್ಲದಂತಾಗಿದೆ.
ಇತ್ತೀಚೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೂಡ “ಯಾವುದೇ ಕ್ಷಣದಲ್ಲಾದರೂ ಸಂಪುಟ ವಿಸ್ತರಣೆಯಾಗಬಹುದು” ಎಂದು ಸುಳಿವು ನೀಡಿರುವುದು ಸಚಿವಾಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ.
ಸಂಪುಟ ವಿಸ್ತರಣೆಯಲ್ಲಿ ಯುವ ಮುಖಗಳು, ಮಹಿಳೆಯರು ಹಾಗೂ ಸಾಮಾಜಿಕ ನ್ಯಾಯಕ್ಕೆ (ಹಿಂದುಳಿದ ವರ್ಗಗಳು, ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರು) ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ರಾಹುಲ್ ಗಾಂಧಿ ಸಲಹೆ ನೀಡಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಹೆಚ್ಚಿದ ಲಾಬಿ ಹಾಗೂ ಕಸರತ್ತು:
ಹೆಚ್ಚಿದ ಲಾಬಿ ಹಾಗೂ ಕಸರತ್ತು
ಹೈಕಮಾಂಡ್ ಮಟ್ಟದಲ್ಲಿ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ಬೆಂಗಳೂರಿನಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಪ್ರಥಮ ಹಾಗೂ ದ್ವಿತೀಯ ಬಾರಿಗೆ ಆಯ್ಕೆಯಾಗಿರುವ ಸುಮಾರು 15ಕ್ಕೂ ಹೆಚ್ಚು ಕಿರಿಯ ಶಾಸಕರು ನೇರವಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಂಪುಟದಲ್ಲಿ ಹೊಸ ಮುಖಗಳಿಗೆ ಹಾಗೂ ಯುವ ನಾಯಕರಿಗೆ ಆದ್ಯತೆ ನೀಡಬೇಕೆಂದು ಬಲವಾದ ಮನವಿ ಸಲ್ಲಿಸಿದ್ದಾರೆ.
ಮತ್ತೊಂದೆಡೆ, ಅನುಭವಿ ಹಾಗೂ ಹಿರಿಯ ಶಾಸಕರು ತಮಗೆ ಸಚಿವ ಸ್ಥಾನ ಬಿಟ್ಟುಕೊಡಬೇಕೆಂದು ವರಿಷ್ಠರ ಮೇಲೆ ವಿವಿಧ ಮೂಲಗಳ ಮೂಲಕ ಒತ್ತಡ ಹೇರುತ್ತಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಅಂತಿಮ ಸಭೆಯ ಮೇಲೆ ಕಣ್ಣಿಟ್ಟಿರುವ ಹಲವು ಆಕಾಂಕ್ಷಿ ಶಾಸಕರು ದೆಹಲಿಗೆ ಪ್ರಯಾಣ ಬೆಳೆಸಲು ಸಿದ್ಧತೆ ನಡೆಸಿದ್ದಾರೆ.
ದೆಹಲಿ ವರಿಷ್ಠರ ಅಂತಿಮ ಮುದ್ರೆ ಬಿದ್ದ ಬಳಿಕ, ಸಚಿವ ಸ್ಥಾನದ ಲಕ್ ಯಾರಿಗೆ ಒಲಿಯಲಿದೆ ಮತ್ತು ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಹೊರಬರಲಿದೆ.
ದೆಹಲಿಗೆ ಆಕಾಂಕ್ಷಿ ಶಾಸಕರ ದಂಡು
ದೆಹಲಿಗೆ ಆಕಾಂಕ್ಷಿ ಶಾಸಕರ ದಂಡು
ಸಂಪುಟ ಪ್ರವೇಶಕ್ಕಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಮತ್ತು ವರಿಷ್ಠರ ಭೇಟಿಗಾಗಿ ಮುಖ್ಯಮಂತ್ರಿಗಳು ಹಾಗೂ ಶಾಸಕರ ದಂಡು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದೆ.
ಮುಖ್ಯಮಂತ್ರಿಗಳಿಗೂ ಮುನ್ನವೇ ದೆಹಲಿಗೆ ತಲುಪಿರುವ ಆಕಾಂಕ್ಷಿ ಶಾಸಕರು, ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದಾರೆ
ಕರ್ನಾಟಕದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಕೆಲವರಿಗೆ ಪ್ರಥಮ ಹಂತದಲ್ಲೇ ಅವಕಾಶ ಸಿಕ್ಕಿದ್ದರೆ, ಹಲವು ಹಿರಿಯ ಹಾಗೂ ನಿಷ್ಠಾವಂತ ಶಾಸಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದರು. ಈಗ ಹೈಕಮಾಂಡ್ ಕೊಟ್ಟ ಮಾತಿನಂತೆ ಸಂಪುಟ ವಿಸ್ತರಣೆ ಅಥವಾ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಪ್ರಕ್ರಿಯೆ ಚಾಲನೆ ಪಡೆದುಕೊಂಡಿದೆ.
ಈ ಹಿಂದೆ ನಡೆದ ಸಚಿವ ಸಂಪುಟ ಸಭೆಗಳು ಮತ್ತು ದೆಹಲಿ ವಲಯದ ನಾಯಕರ ಜೊತೆಗಿನ ಚರ್ಚೆಗಳ ನಂತರ, ಈ ವಿಸ್ತರಣೆಯು ಸರ್ಕಾರದ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ನಿರ್ಣಾಯಕವಾಗಲಿದೆ.
ದೆಹಲಿ ಮಟ್ಟದಲ್ಲಿ ನಡೆಯುವ ಈ ಮಹತ್ವದ ಸಭೆಗಳಲ್ಲಿ ವರಿಷ್ಠರು ಯಾರಿಗೆ ಒಲವು ತೋರಲಿದ್ದಾರೆ ಮತ್ತು ಸಂಪುಟ ಸೇರುವ ನಲವತ್ತು-ಐವತ್ತು ಆಕಾಂಕ್ಷಿಗಳಲ್ಲಿ ಯಾರಿಗೆ ಸಚಿವ ಭಾಗ್ಯ ಸಿಗಲಿದೆ ಎಂಬುದು ಮುಂದಿನ ಕೆಲವೇ ದಿನಗಳಲ್ಲಿ ಸ್ಪಷ್ಟವಾಗಲಿ
ದೆಹಲಿಗೆ ತೆರಳಿರುವ ಪ್ರಮುಖ ಶಾಸಕರು
ದೆಹಲಿಗೆ ತೆರಳಿರುವ ಪ್ರಮುಖ ಶಾಸಕರು
ಅಶೋಕ್ ಪಟ್ಟಣ
ಬಸನಗೌಡ ದದ್ದಲ್
ಬಸನಗೌಡ ಬಾದರ್ಲಿ
ಪುಟ್ಟರಂಗ ಶೆಟ್ಟಿ
ವಸಂತ್ ಕುಮಾರ್
ಪಿ.ಎಂ. ನರೇಂದ್ರ ಸ್ವಾಮಿ
ಸುಧಾಮ್ ದಾಸ್
ಹಂಪನಗೌಡ ಬಾದರ್ಲಿ

