HomeLatest Newsರಾಜ್ಯ ಸಚಿವ ಸಂಪುಟ ವಿಸ್ತರಣೆ: ನಾಳೆ ನೂತನ ಸಚಿವರ ಪ್ರಮಾಣ ವಚನ ಸಂಭವ!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ನಾಳೆ ನೂತನ ಸಚಿವರ ಪ್ರಮಾಣ ವಚನ ಸಂಭವ!

ಬೆಂಗಳೂರು- ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಹಂತ ತಲುಪಿದೆ. ದೆಹಲಿಯಲ್ಲಿ ಮುಂದುವರಿದಿರುವ ರಾಜಕೀಯ ಬೆಳವಣಿಗೆಗಳ ನಡುವೆ, ಇಂದು (ಬುಧವಾರ, ಜುಲೈ 29, 2026) ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಒಪ್ಪಿಗೆ ಸಿಗುವ ಸಾಧ್ಯತೆಯಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ ನೆರವೇರುವ ಸಾಧ್ಯತೆ ದಟ್ಟವಾಗಿದೆ.

ದೆಹಲಿಯಲ್ಲಿ ನಡೆದ ಗಹನ ಚರ್ಚೆ

ದೆಹಲಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ನಿವಾಸದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸಚಿವ ಸಂಪುಟ ವಿಸ್ತರಣೆ ಕುರಿತು ಗಹನವಾದ ಚರ್ಚೆ ನಡೆಸಿದರು.

ಆಗಸ್ಟ್ 6ರಿಂದ ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಪೂರ್ಣಗೊಳಿಸಲು ಕಾಂಗ್ರೆಸ್ ನಾಯಕರು ವೇಗವಾಗಿ ಹೆಜ್ಜೆ ಇಟ್ಟಿದ್ದಾರೆ. ಸಚಿವರಾಗಲಿರುವ ಆಕಾಂಕ್ಷಿಗಳ ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸಲಾಗಿದ್ದು, ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಡೆ ಹಾಗೂ ರಾಹುಲ್ ಗಾಂಧಿ ಅವರ ಅಂತಿಮ ಅನುಮೋದನೆ ಬಾಕಿಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸ್ಥಾನಕ್ಕಾಗಿ ಶಾಸಕರ ತೀವ್ರ ಲಾಬಿ

ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗಾಗಿ ದೆಹಲಿಯಲ್ಲಿ ಸುಮಾರು 40ಕ್ಕೂ ಹೆಚ್ಚು ಶಾಸಕರು ಕಾವಲು ಕಾಯುತ್ತಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ.

ಕೆ.ಸಿ. ವೇಣುಗೋಪಾಲ್ ಅವರು ವಿವಿಧ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟಕ್ಕೆ ಸೇರಿಸುವ ವಿಚಾರದಲ್ಲಿ ಆರಂಭದಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು ಎನ್ನಲಾಗಿದೆ.

ಮತ್ತೊಂದೆಡೆ ಎಂ.ಆರ್. ಸೀತಾರಾಂ, ಎ.ಎಸ್. ಪೊನ್ನಣ್ಣ, ಹಂಪನಗೌಡ ಬಾದರ್ಲಿ, ಬಸವರಾಜ ಶಿವಣ್ಣನವರ್ ಹಾಗೂ ಆರ್.ಬಿ. ತಿಮ್ಮಾಪುರ ಅವರ ಹೆಸರನ್ನು ಸಿದ್ದರಾಮಯ್ಯ ಬಲವಾಗಿ ಬೆಂಬಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಮೀಕ್ಷಾ ವರದಿ ಆಧಾರದಲ್ಲಿ ಪಟ್ಟಿ ಅಂತಿಮ

ಸಮೀಕ್ಷಾ ವರದಿ ಹಾಗೂ ಸಾಮಾಜಿಕ ನ್ಯಾಯದ ಸೂತ್ರ2028ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ರಾಜಕೀಯ ತಂತ್ರಜ್ಞ ಸುನಿಲ್ ಕನುಗೋಲು ನೇತೃತ್ವದ ಆಂತರಿಕ ಸಮೀಕ್ಷೆಯ ವರದಿಯ ಆಧಾರದ ಮೇಲೆಯೇ ಸಚಿವರ ಅಂತಿಮ ಪಟ್ಟಿ ತಯಾರಿಸಲಾಗಿದೆ ಎನ್ನಲಾಗಿದೆ.

2028ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ರಾಜಕೀಯ ತಂತ್ರಜ್ಞ ಸುನಿಲ್ ಕನುಗೋಲು ನೇತೃತ್ವದ ಆಂತರಿಕ ಸಮೀಕ್ಷೆಯ ವರದಿಯ ಆಧಾರದ ಮೇಲೆಯೇ ಸಚಿವರ ಅಂತಿಮ ಪಟ್ಟಿ ತಯಾರಿಸಲಾಗಿದೆ ಎನ್ನಲಾಗಿದೆ. ಪ್ರಾದೇಶಿಕವಾಗಿ ಬಲಿಷ್ಠರಾಗಿರುವ, ಸಮುದಾಯದ ಮೇಲೆ ಹಿಡಿತವಿರುವ ಮತ್ತು ಮುಂದಿನ ಚುನಾವಣೆಯಲ್ಲಿ ಗೆಲುವಿನ ರೂವಾರಿಗಳಾಗಬಲ್ಲ ಶಾಸಕರಿಗೆ ಮಣೆ ಹಾಕಲು ಹೈಕಮಾಂಡ್ ನಿರ್ಧರಿಸಿದೆ.

ಪ್ರಾದೇಶಿಕವಾಗಿ ಬಲಿಷ್ಠರಾಗಿರುವ, ಸಮುದಾಯದ ಮೇಲೆ ಹಿಡಿತವಿರುವ ಮತ್ತು ಮುಂದಿನ ಚುನಾವಣೆಯಲ್ಲಿ ಗೆಲುವಿನ ರೂವಾರಿಗಳಾಗಬಲ್ಲ ಶಾಸಕರಿಗೆ ಮಣೆ ಹಾಕಲು ಹೈಕಮಾಂಡ್ ನಿರ್ಧರಿಸಿದೆ.

ಪ್ರಮಾಣ ವಚನ ಸಮಾರಂಭದ ಸಿದ್ಧತೆ

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಸ್ತುತ ಹೊರರಾಜ್ಯದಲ್ಲಿದ್ದು, ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಮರಳುವ ನಿರೀಕ್ಷೆಯಿದೆ. ಗುರುವಾರ ಸಂಜೆ 5:00 ಗಂಟೆಗೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅಥವಾ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಸಲು ಈಗಾಗಲೇ ಸಿದ್ಧತೆಗಳ ಬಗ್ಗೆ ಮಾಹಿತಿ ರವಾನಿಸಲಾಗಿದೆ. ಒಂದು ವೇಳೆ ಅಂದು ವಿಳಂಬವಾದರೆ ಶುಕ್ರವಾರ ಈ ಪ್ರಕ್ರಿಯೆ ನೆರವೇರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ, ನಾಯಕರ ಸಲಹೆಯಂತೆ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಬೇಷರತ್ ಕ್ಷಮೆಯಾಚಿಸಿದ್ದಾರೆಂದು ತಿಳಿದುಬಂದಿದೆ.

ಸ್ಪೀಕರ್ ಹಾಗೂ ಸಭಾಪತಿ ಹುದ್ದೆಗಳ ಮೇಲೂ ಕಣ್ಣು

ಸ್ಪೀಕರ್ ಹಾಗೂ ಸಭಾಪತಿ ಹುದ್ದೆಗಳ ಮೇಲೂ ಕಣ್ಣು

ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ವಿಧಾನಸಭೆ ಸಭಾಧ್ಯಕ್ಷ (ಸ್ಪೀಕರ್) ಹಾಗೂ ವಿಧಾನ ಪರಿಷತ್ ಸಭಾಪತಿ ಹುದ್ದೆಗಳ ಕುರಿತಾಗಿಯೂ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆಯಿದ್ದು, ಈ ಹುದ್ದೆಗಳಿಗೆ ಹಿರಿಯ ನಾಯಕರಾದ ಎಚ್.ಕೆ. ಪಾಟೀಲ್ ಹಾಗೂ ಎನ್.ಎಸ್. ಬೋಸರಾಜು ಅವರ ಹೆಸರುಗಳು ಮುಂಚೂಣಿಯಲ್ಲಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular