HomeLatest NewsBIG NEWS : ಜುಲೈ 2 ಕ್ಕೆ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ...

BIG NEWS : ಜುಲೈ 2 ಕ್ಕೆ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

ಬೆಂಗಳೂರು : ಜುಲೈ 2 ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಸಿಎಂ , ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದಾರೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.

ನಿನ್ನೆಯೇ ( ಜೂ.19) ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿತ್ತು, ಆದರೆ ಕೊನೆ ಕ್ಷಣದಲ್ಲಿ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆದಿತ್ತು. ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆ ರದ್ದಾಗಿದ್ದು, ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಜುಲೈ 2 ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮುಂದಿನ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular