BREAKING : ‘ಕರ್ನಾಟಕ CET’ ಪರೀಕ್ಷೆಯ ವೇಳಾಪಟ್ಟಿ ಬದಲಾವಣೆ,  ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ |Karnataka CET Exam 2025

ಬೆಂಗಳೂರು : ಏ.15 ರಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಏ.15 ರಿಂದ 17 ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ . ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏ.15 ಕ್ಕೆ ಹಿಂದೂಡಿಕೆ ಆಗಿದೆ. ಈ ಮೊದಲು ಇದನ್ನು ಏ.18 ಕ್ಕೆ ನಿಗದಿಪಡಿಸಲಾಗಿತ್ತು. ಏ.18 ರಂದು ಗುಡ್ ಫ್ರೈಡೇ ಸರ್ಕಾರ ರಜೆ ಇರುವುದರಿಂದ ದಿನಾಂಕ ಬದಲಾವಣೆ ಮಾಡಲಾಗಿದೆ.

ಸಿಇಟಿ ಪರೀಕ್ಷೆಯನ್ನು ಈ ಬಾರಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆಯುವ ನಿರೀಕ್ಷೆಯಿದೆ ಎಂದು ಪ್ರಾಧಿಕಾರದ ನಿರ್ದೇಶಕ ಹೆಚ್ ಪ್ರಸನ್ನ ಮಾಹಿತಿ ನೀಡಿದ್ದಾರೆ.ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಏ.15 ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಏಪ್ರಿಲ್ 16 ರಂದು 10:30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಏಪ್ರಿಲ್ 17 ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read