HomeKarnatakaBIG NEWS: 24 ಸಚಿವರ ಪಟ್ಟಿ ಬಹುತೇಕ ಫೈನಲ್; ನಾಳೆಯೇ ಪ್ರಮಾಣವಚನ ಸಾಧ್ಯತೆ

BIG NEWS: 24 ಸಚಿವರ ಪಟ್ಟಿ ಬಹುತೇಕ ಫೈನಲ್; ನಾಳೆಯೇ ಪ್ರಮಾಣವಚನ ಸಾಧ್ಯತೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ನಡೆದಿದ್ದು, 24 ನೂತನ ಸಚಿವರ ಪಟ್ಟಿ ಬಹುತೇಕ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಿದ್ಧವಾಗಿದ್ದ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೆಲವರ ಹೆಸರು ಬದಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನದೆದ ಸಭೆ ಬಳಿಕ ಸುಮಾರು 24 ಸಚಿವರ ಪಟ್ಟಿ ಫೈನಲ್ ಮಾಡಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಶರಣಪ್ರಕಾಶ್ ದರ್ಶನಾಪೂರ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೃಷ್ಣಬೈರೇಗೌಡ, ಹೆಚ್.ಕೆ.ಪಾಟೀಲ್, ಡಾ.ಶರಣಪ್ರಕಾಶ್ ಪಾಟೀಲ್, ಕೆ.ಎನ್.ರಾಜಣ್ಣ, ಬಿ.ನಾಗೇಂದ್ರ, ಆರ್.ವಿ.ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ 24 ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದು ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular