ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷವಾದ ಹಿನ್ನಲೆಯಲ್ಲಿ ವರ್ಷವಿಡೀ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎನ್ನುವ ಹೆಸರಲ್ಲಿ ಸಂಭ್ರಮಾಚರಣೆ ನಡೆಸಲಾಗುವುದು. 2023ರ ನವೆಂಬರ್ 1ರಿಂದ 2024ರ ನವೆಂಬರ್ 1ರವರೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ದೇಶಿ ಕ್ರೀಡೆ, ಕಲೆ, ಕನ್ನಡ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳ ಆಯೋಜನೆಗೆ ಸೂಚನೆ ನೀಡಲಾಗಿದೆ. ಯುವ ಪೀಳಿಗೆಗೆ ಕನ್ನಡ ನಾಡು, ಸಂಸ್ಕೃತಿ, ಪ್ರಾದೇಶಿಕತೆಯ ಭವ್ಯತೆ ತಿಳಿಸಲು ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಲು ಸಿಎಂ ಸೂಚನೆ ನೀಡಿದ್ದಾರೆ.
ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ 'ಕರ್ನಾಟಕ ಸಂಭ್ರಮ' ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.
ಕನ್ನಡ… pic.twitter.com/RVG8oVWWCi
— CM of Karnataka (@CMofKarnataka) October 4, 2023