HomeKarnatakaಡಿ.ಕೆ.ಶಿವಕುಮಾರ್ ಬಳಿಕ ಈಗ ಸಿದ್ದರಾಮಯ್ಯ ದೆಹಲಿ ಪ್ರಯಾಣ!

ಡಿ.ಕೆ.ಶಿವಕುಮಾರ್ ಬಳಿಕ ಈಗ ಸಿದ್ದರಾಮಯ್ಯ ದೆಹಲಿ ಪ್ರಯಾಣ!

ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗಿದ್ದಾರೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ವಿಮಾನ ಏರುತ್ತಿದ್ದಾರೆ. ಆದರೆ ಈ ಬಾರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿಗೆ ಹೋಗಲಿದ್ದಾರೆಯೇ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ದೆಹಲಿ ಪ್ರವಾಸದಲ್ಲಿ ಇರುತ್ತಾರೆ. ಡಿಸೆಂಬರ್ 27ರ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಭೆಗೆ ಆಹ್ವಾನ ನೀಡಲಾಗಿದೆ.

ದೆಹಲಿ ಭೇಟಿ ಬಳಿಕ ಮಾತನಾಡಿದ್ದ ಡಿ.ಕೆ.ಶಿವಕುಮಾರ್, “ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಕಾಂಗ್ರೆಸ್ ಆಡಳಿತದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಸಿದ್ದರಾಮಯ್ಯ ಅವರು ದೆಹಲಿಗೆ ತೆರೆಳಲಿದ್ದಾರೆ” ಎಂದು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ನನಗೆ ಆಹ್ವಾನವಿಲ್ಲ. ವರಿಷ್ಠರು ಕರೆದರೆ ಖಂಡಿತ ದೆಹಲಿಗೆ ಹೋಗುತ್ತೇನೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 5 ಜನರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಶನಿವಾರ ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಶುಕ್ರವಾರ ಸಂಜೆ 7 ಗಂಟೆಗೆ ಬೆಂಗಳೂರು ನಗರದಿಂದ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.

ಡಿಸೆಂಬರ್ 27ರ ಶನಿವಾರ ಬೆಳಗ್ಗೆ 10.30ಕ್ಕೆ ಸಭೆ ಆರಂಭವಾಗಲಿದೆ. ಈ ಸಭೆಯ ಬಳಿಕ ಅವಕಾಶ ಸಿಕ್ಕರೆ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಬಳಿ ಸಂಪುಟ ಪುನಾರಚನೆ ಕುರಿತು ಚರ್ಚೆಯನ್ನು ನಡೆಸಲಿದ್ದಾರೆ. ಆದರೆ ಹೈಕಮಾಂಡ್ ಭೇಟಿಗೆ ಇನ್ನೂ ಸಮಯ ನಿಗದಿಯಾಗಿಲ್ಲ.

ಕರ್ನಾಟಕದ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾದ ಬಳಿಕ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ. ವೋಟ್ ಚೋರಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಬಿಟ್ಟರೆ ಪ್ರತ್ಯೇಕವಾಗಿ ಹೈಕಮಾಂಡ್ ನಾಯಕರ ಬಳಿ ಕರ್ನಾಟಕ ರಾಜಕೀಯದ ಕುರಿತು ಚರ್ಚೆಯನ್ನು ಮಾಡಿಲ್ಲ.

ನಾಯಕತ್ವ ಬದಲಾವಣೆ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ನಾಯಕತ್ವ ಬದಲಾವಣೆ ಚರ್ಚೆಯನ್ನು ಹೈಕಮಾಂಡ್ ನಾಯಕರ ಹೆಗಲಿಗೆ ಹಾಕಿದ್ದಾರೆ. ಸೋಮವಾರ ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ” ಎಂದು ಹೇಳಿದ್ದರು.

“ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ” ಎಂದು ತಿಳಿಸಿದ್ದರು.

“ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದರು.

ನವೆಂಬರ್‌ನಲ್ಲಿಯೇ ಸಿದ್ದರಾಮಯ್ಯ ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ್ದರು. ಆದರೆ ಬಳಿಕ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿತು. ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ಪ್ರಾರಂಭವಾಯಿತು. ಬೆಳಗಾವಿ ಚಳಿಗಾಲದ ಅಧಿವೇಶನ ಎದುರಾಯಿತು. ಆದ್ದರಿಂದ ಸಂಪುಟ ಪುನಾರಚನೆ ಬೇಡಿಕೆ ಇನ್ನೂ ಹಾಗೆಯೇ ಉಳಿದಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular