BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ ಆರಂಭವಾಗಿದೆ. ಅದರಲ್ಲಿಯೂ ವಿಕೇಂಡ್ ಹೊತ್ತಿನ ಈ ಸಂದರ್ಭದಲ್ಲಿ ಮನೆಯಿಂದ ಹೊರಬರಲು ಆಗದಷ್ಟು ಚಳಿ ಪ್ರಮಾಣ ಹೆಚ್ಚಿದೆ. ಚಳಿಯ ಜೊತೆಗೆ ಕೆಲ ಜಿಲ್ಲೆಗಳ್ಲಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕ ಭಾಗದ ಒಂದೆರೆಡುಕಡೆಗಳಲ್ಲಿ ದಟ್ಟವಾದ ಮಂಜು ಆವರಿಸಲುದೆ. ದಕ್ಷಿಣ ಒಳನಾಡಿನಲ್ಲಿಯೂ ಮಂಜು ಕವಿದ ವಾತಾವರಣವಿರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 16, ಕಲಬುರಗಿ ಗರಿಷ್ಠ 31 ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ 28, ಕನಿಷ್ಠ 15, ಮೈಸೂರು ಗರಿಷ್ಥ 28 ಕನಿಷ್ಠ 16, ಬೆಳಗಾವಿ ಗರಿಷ್ಠ29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read