ಬೆಂಗಳೂರು: ರಾಜ್ಯದಲ್ಲಿ ಮೈಕೊರೆಯುವ ಚಳಿ, ಶೀತಗಾಳಿಗೆ ಜನರು ತತ್ತರಿಸುತ್ತಿದ್ದಾರೆ. ಇದೇ ವೇಳೆ ಗಾಳಿಯ ಗುಣಮಟ್ಟ ಕುಸಿದಿದ್ದು, ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಮಾತ್ರವಲ್ಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಶೀತಗಾಳಿ ಜನರನ್ನು ನಡುಗಿಸುತ್ತಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರೆದಿದ್ದು, ಐದು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. 6.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಕಳೆದ 20 ವರ್ಷಗಳಲ್ಲಿ ಮೂರನೇ ಬಾರಿಗೆ ದಾಖಲಾದ ಅತ್ಯಂತ ಕಡಿಮೆ ಉಷ್ಣಾಂಶವಾಗಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರಿನಲ್ಲಿ ಮೈಕೊರೆವ ಚಳಿ, ದಟ್ಟವಾದ ಮೋಡಕವಿದವಾತಾವರಣವಿದೆ. ತೀವ್ರವಾದ ಚಳಿ, ಶೀತಗಾಳಿ ಹಿನ್ನೆಲೆಯಲ್ಲಿ ಜನರು ಆರೋಗ್ಯದ ಬಗ್ಗೆ ಗಮನ ಹರಿಸ್ವಂತೆ ಹಾಗೂ ಬೆಚ್ಚನೆಯ ಉಡುಪು ಧರಿಸಿ, ಸಮತೋಲನ ಆಹಾರ ಸೇವನೆ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

