HomeLatest Newsಅಬ್ಬಬ್ಬಾ ಏನ್ ಚಳಿ… ಕಾಶ್ಮೀರದಂತಾದ ಬೆಂಗಳೂರು: ಇನ್ನೂ ಒಂದು ವಾರ ಮುಂದುವರೆಯಲಿದೆ ಇದೇ ವಾತಾವರಣ

ಅಬ್ಬಬ್ಬಾ ಏನ್ ಚಳಿ… ಕಾಶ್ಮೀರದಂತಾದ ಬೆಂಗಳೂರು: ಇನ್ನೂ ಒಂದು ವಾರ ಮುಂದುವರೆಯಲಿದೆ ಇದೇ ವಾತಾವರಣ

ಬೆಂಗಳೂರು: ರಾಜ್ಯಾದ್ಯಂತ ಮೈ ಕೊರೆವ ಚಳಿಗೆ ಜನರು ಗಢಗಢ ನಡುಗುತ್ತಿದ್ದಾರೆ. ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದ್ದು, ಶೀತಗಾಳಿ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಕಾಶ್ಮೀರದಂತಾಗಿದ್ದು, ಶೀತದಲೆಗೆ ಜನರು ತತ್ತರಿಸುತ್ತಿದ್ದಾರೆ.

ಬೆಂಗಳೂರಿನ ಹಲವೆಡೆ ಎರಡು ಮೂರು ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ದಟ್ಟವಾದ ಮೋಡ ಕವಿದ ವಾತಾವಣ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಬೆಂಗಳೂರಿನಲ್ಲಿ ಇನ್ನೂ ಒಂದು ವಾರಗಳ ಕಾಲ ಶೀತಗಾಳಿ, ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ,

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶೀತಗಾಳಿ ಹೆಚ್ಚಾಗಳು ಕಾರಣವಾಗಿದೆ. ಇದು ರಾಜ್ಯದ ಮೇಲೂ ಪರಿಣಾಮ ಬೀರಿದೆ. ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಬೆಂಗಳೂರಿನಲ್ಲಿ ಇಂದು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ನಿನ್ನೆ 14 ಡಿಗ್ರಿಗೆ ಇಳಿಕೆಯಾಗಿತ್ತು. ಜನರು ಮನೆಯಿಂದ ಹೊರಬರಲಾಗದ ಸ್ಥಿತಿ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೀತಗಾಳಿ, ಚಳಿ ಅಬ್ಬರದಿಂದಾಗಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಬೆಚ್ಚನೆಯ ಉಡುಪು ಧರಿಸಿ, ಆರೋಗ್ಯದ ಬಗ್ಗೆ ಮುಂಜಾಗೃತೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನ ಮುಂದುವರೆಯಲಿದೆ. ಕೆಲವೆಡೆ ತುಂತುರು ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಲಾಪುರ, ತುಮಕೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ, ಬೆಂಗಳೂರು ಗ್ರಾಮಾಂತರ, ಬಳ್ಲಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳುರು, ಚಾಮರಾಜನಗರ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉದುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ಯಾದಗಿರಿ, ಗದಗ, ಕೊಪ್ಪಳ, ವಿಜಯಪುರ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular