HomeKarnatakaಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಇಂದು ಸಂಜೆ ಬೆಂಗಳೂರಿಗೆ: ಕಾಂಗ್ರೆಸ್ ಸರಣಿ ಸಭೆ: ಸಂಪುಟ ವಿಸ್ತರಣೆ, ನಿಗಮ ಮಂಡಳಿ...

ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಇಂದು ಸಂಜೆ ಬೆಂಗಳೂರಿಗೆ: ಕಾಂಗ್ರೆಸ್ ಸರಣಿ ಸಭೆ: ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ ಚರ್ಚೆ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಸರಣಿ ಸಭೆ ನಡೆಸಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಾತಿ, ಪಕ್ಷ ಸಂಘಟನೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಿಎಂ ಡಿ.ಕೆ.ಸ್ಘಿವಕುಮಾರ್ ಸರ್ಕಾರದ ಕಾರ್ಯವೈಖರಿ, ರಾಜ್ಯ ಕಾಂಗ್ರೆಸ್‌ನ ರಾಜಕೀಯ ಪರಿಸ್ಥಿತಿ ಹಾಅಗೂ ಮುಂಬರುವ ಚುನಾವಣೆಗಳಿಗೆ ೦ಕ್ಷ ಸಂಘಟನೆಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ರಾಅಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ, ಸಮಾಲೋಚನೆ ನ್ಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮುಖವಾಗಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದೊಳಗೆ ಹಲವು ಹಂತಗಳಲ್ಲಿ ಚರ್ಚೆ ನಡೆಯುತ್ತಿದ್ದು, ಯಾರಿಗೆ ಅವಕಾಶ ನೀಡಬೇಕು, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಹೇಗೆ ಕಾಯ್ದುಕೊಳ್ಳಬೇಕು ಎಂಬ ಬಗ್ಗೆಯೂ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ.

ವಿಶೇಷವಾಗಿ ಸಚಿವ ಸ್ಥಾನಕ್ಕಾಗಿ ಆಕಾಂಕ್ಷೆ ಹೊಂದಿರುವ ಶಾಸಕರು ಹಾಗೂ ಪಕ್ಷದ ಹಿರಿಯ ನಾಯಕರ ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಹಲವು ಅಂಶಗಳು ಚರ್ಚೆಯ ಭಾಗವಾಗುವ ನಿರೀಕ್ಷೆಯಿದೆ.

ಇನ್ನು ಇದರ ಜೊತೆಗೆ ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಸರಕಾರಿ ಸಂಸ್ಥೆಗಳಿಗೆ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗೂ ವೇಗ ನೀಡುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಂಘಟಿಸುವುದು, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಬಲಪಡಿಸುವುದು, ನಾಯಕರ ನಡುವಿನ ಸಮನ್ವಯ ಹೆಚ್ಚಿಸುವುದು, ಯೋಜನೆಗಳನ್ನು ಜನರಿಗೆ ತಲುಪಿಸುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ.

ಇನ್ನು ಸಿಎಂ ಡಿ.ಕೆ.ಶಿವಕುಮಾರ್ ನ್ರ‍ೇತೃತ್ವದ ಸರ್ಕಾರ 100 ದಿನ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿರಲಿಲ್ಲ ಎಂಬ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವ್ಯಕ್ತಪಡಿಸಿರುವ ಅಸಮಾಧಾನವೂ ಚರ್ಚೆಗೆ ಬರುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular