HomeKarnatakaBIG NEWS: ರಾಜ್ಯದಲ್ಲಿ ಒಂದೇ ದಿನದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಬೆಂಗಳೂರಿನಲ್ಲಿಯೇ ಅತಿ...

BIG NEWS: ರಾಜ್ಯದಲ್ಲಿ ಒಂದೇ ದಿನದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು


ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇವರೆಗೆ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ.

ಒಂದೇ ದಿನದಲ್ಲಿ ರಾಜ್ಯದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣ 175ಕ್ಕೆ ಏರಿಕೆಯಾಗಿದೆ. 11 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 132 ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, 13 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಕೋವಿಡ್ ಹಾಟ್ ಸ್ಪಾಟ್ ಆಗುವ ಆತಂಕ ಎದುರಾಗಿದೆ. ಬೆಂಗಳೂರು ನಗರದಲ್ಲಿ 68 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. 2366 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular