ಶಿವಮೊಗ್ಗ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಆಧುನಿಕ ಲಾಂಡ್ರಿ, ಬೆಂಗಳೂರು ಮತ್ತು ಮೈಸೂರು ನಗರದ ಧೋಬಿ ಘಾಟುಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮೆಷಿನ್ ಮತ್ತು ಐರನಿಂಗ್ ಮಷಿನ್ ಇತ್ಯಾದಿ ಸಾಮಾಗ್ರಿಗಳನ್ನು ಒಳಗೊಂಡಂತೆ ತಲಾ 75 ಲಕ್ಷ ರೂ.ಗಳ ವೆಚ್ಚದಲ್ಲಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸುವುದು ಈ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ- 2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರು ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ. 2024-25 ಮತ್ತು 2025-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಸೆ, 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://kmmd.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಲ್ಪಸಂಖ್ಯಾತರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2026-27 ನೇ ಸಾಲಿಗೆ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದೇಶಿ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸಮುದಾಯ ಆಧಾರಿತ ತರಬೇತಿ ಯೋಜನೆ, ವ್ಯಾಪಾರ/ ಉದ್ಯಮಿಗಳಿಗೆ ನೇರಸಾಲ ಯೋಜನೆ, ಸಾಂತ್ವನ ಯೋಜನೆ, ಸಿಖ್‌ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ನವೋದಯ ಯೋಜನೆ, ಫಾಸ್ಟ್ಫುಡ್ ಟ್ರಕ್/ ಟ್ರೇಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಪ್ರೋತ್ಸಾಹ ಯೋಜನೆಯಡಿ www.kmdconline.karnataka.gov.in ಮೂಲಕ ಸೆ.17 ರೊಳಗಾಗಿ ಅರ್ಜಿ ಸಲ್ಲಿಸುವುದು.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಶ್ರಮಶಕ್ತಿ ಸಾಲ ಯೋಜನೆಯಡಿಯಲ್ಲಿ ಎಲ್ಲಾ ಮೂಲಗಳಿಂದ ಕುಟುಂಬ ವಾರ್ಷಿಕ ಆದಾಯ ಮಿತಿ ರೂ.6 ಲಕ್ಷದೊಳಗಿರಬೇಕು. ಸಾಂತ್ವನ ಯೋಜನೆಯಲ್ಲಿ ಕುಟುಂಬ ವಾರ್ಷಿಕ ಆದಾಯ ರೂ.8 ಲಕ್ಷದದೊಳಗಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಗ್ರಾಮೀಣ ಪ್ರದೇಶದವರಿಗೆ ರೂ.96000 ವಾರ್ಷಿಕ ಆದಾಯ ಇರಬೇಕು. ಅರ್ಜಿದಾರರು ಕನಿಷ್ಠ 18 ರಿಂದ 55 ವರ್ಷದೊಳಗಿನವರಾಗಿರಬೇಕು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು. ನಿಗಮದ ಇತರ ಯೋಜನೆಗಳಡಿಯಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈಗಾಗಲೇ ಸಾಲಸೌಲಭ್ಯ ಪಡೆದಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಅರ್ಜಿದಾರರು ಬ್ಯಾಂಕ್ ಖಾತೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗದ ರಸ್ತೆ, ಅಚ್ಯುತರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ, ದೂ.ಸಂ :08182-228262 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

