HomeKarnatakaಭೂ-ಸುರಕ್ಷಾ ಯೋಜನೆಯಡಿ ಅಮೋಘ ಸಾಧನೆ: 100 ಕೋಟಿ ಕಂದಾಯ ದಾಖಲೆಗಳ ಡಿಜಿಟಲೀಕರಣ

ಭೂ-ಸುರಕ್ಷಾ ಯೋಜನೆಯಡಿ ಅಮೋಘ ಸಾಧನೆ: 100 ಕೋಟಿ ಕಂದಾಯ ದಾಖಲೆಗಳ ಡಿಜಿಟಲೀಕರಣ

ಬೆಂಗಳೂರು: ಕಂದಾಯ ದಾಖಲೆಗಳ ಡಿಜಿಟಲೀಕರಣ: ಕರ್ನಾಟಕದ ಅಮೋಘ ಸಾಧನೆಯಾಗಿದ್ದು, 100 ಕೋಟಿ ಪುಟಗಳ ಡಿಜಟಲೀಕರಣ ಪೂರ್ಣಗೊಂಡಿದೆ.

ಇಂದು ಭೂ-ಸುರಕ್ಷಾ ಯೋಜನೆಯಡಿ 100 ಕೋಟಿ ಪುಟಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ರಾಜ್ಯದಾದ್ಯಂತ ಕಂದಾಯ ಇಲಾಖೆಯ ವಿವಿಧ ಕಚೇರಿಗಳಲ್ಲಿದ್ದ ಒಟ್ಟು 1,00,10,19,893 ಪುಟಗಳ ದಾಖಲೆಗಳನ್ನು ಡಿಜಿಟಲೀಕರಿಸಲಾಗಿದೆ.

ಇದರೊಂದಿಗೆ 150 ತಾಲ್ಲೂಕು ಕಚೇರಿಗಳು, 6 ಸಹಾಯಕ ಆಯುಕ್ತರ ಕಚೇರಿಗಳು ಹಾಗೂ 3 ಜಿಲ್ಲಾಧಿಕಾರಿಗಳ ಕಚೇರಿಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ. ಆರ್‌ಸಿ, ಡಿಸಿ, ಎಸಿ ಹಾಗೂ ತಾಲ್ಲೂಕು ಕಚೇರಿಗಳಲ್ಲಿರುವ ಹಳೆಯ ಕಂದಾಯ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯಡಿ ತರಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೂ-ಸುರಕ್ಷಾ ಕೇವಲ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಕಾರ್ಯವಲ್ಲ. ದಶಕಗಳಷ್ಟು ಹಳೆಯ ಕಂದಾಯ ದಾಖಲೆಗಳನ್ನು ಸ್ಕ್ಯಾನ್, ಇಂಡೆಕ್ಸ್, ಕ್ಯಾಟಲಾಗ್ ಮಾಡಿ ಸುರಕ್ಷಿತವಾಗಿ ಸಂರಕ್ಷಿಸುವ ಮೂಲಕ ದಾಖಲೆಗಳ ನಷ್ಟ, ಹಾನಿ ಹಾಗೂ ದುರ್ಬಳಕೆಯನ್ನು ತಡೆಯಲಾಗುತ್ತಿದೆ. ನಾಗರಿಕರಿಗೆ ಅಗತ್ಯ ದಾಖಲೆಗಳನ್ನು ತ್ವರಿತವಾಗಿ, ಸುಲಭವಾಗಿ ಮತ್ತು ಪಾರದರ್ಶಕವಾಗಿ ಪಡೆಯುವ ವ್ಯವಸ್ಥೆಯನ್ನೂ ರೂಪಿಸಲಾಗುತ್ತಿದೆ.

100 ಕೋಟಿ ಪುಟಗಳು ಹಾಗೂ 150 ತಾಲ್ಲೂಕುಗಳ ಡಿಜಿಟಲೀಕರಣ ಪೂರ್ಣಗೊಂಡಿರುವುದು ಆಧುನಿಕ, ಪಾರದರ್ಶಕ ಮತ್ತು ನಾಗರಿಕ ಸ್ನೇಹಿ ಕಂದಾಯ ಆಡಳಿತದತ್ತ ಕರ್ನಾಟಕದ ಇರಿಸಿರುವ ಬೃಹತ್‌ ಹೆಜ್ಜೆಯಾಗಿದೆ.

ಈ ಬೃಹತ್ ಕಾರ್ಯವನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿರುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗೂ ನನ್ನ ಅಭಿನಂದನೆಗಳು. ಕಂದಾಯ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಮತ್ತು ಸುರಕ್ಷಿತ ಸಂರಕ್ಷಣೆಯ ಗುರಿ ಸಾಧಿಸುವವರೆಗೆ ಭೂ-ಸುರಕ್ಷಾ ಕಾರ್ಯವನ್ನು ಇನ್ನಷ್ಟು ವೇಗವಾಗಿ ಮುಂದುವರಿಸಲಾಗುವುದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯ ವೈಜ್ಞಾನಿಕ ಮೌಲ್ಯಮಾಪನ

ರಾಜ್ಯದಲ್ಲಿ ಬರ ಪರಿಸ್ಥಿತಿಯ ವೈಜ್ಞಾನಿಕ ಮೌಲ್ಯಮಾಪನ ನಿರಂತರವಾಗಿ ನಡೆಯುತ್ತಿದ್ದು, ಈವರೆಗೆ 177 ತಾಲೂಕುಗಳನ್ನು ‘ಬರಪೀಡಿತ’ ಎಂದು ಘೋಷಿಸಲಾಗಿದೆ.

ಇದರ ಮುಂದುವರಿದ ಭಾಗವಾಗಿ, ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳನ್ನು ಆಧರಿಸಿ 5ನೇ ಹಂತದಲ್ಲಿ 10 ಜಿಲ್ಲೆಗಳ 29 ತಾಲೂಕುಗಳು Step-3: Ground Truthingಗೆ ಅರ್ಹತೆ ಪಡೆದಿವೆ. ಈ ತಾಲೂಕುಗಳಲ್ಲಿ ವೈಜ್ಞಾನಿಕ ಪರಿಶೀಲನೆ ನಡೆಸಿ, ಪಾರದರ್ಶಕ ಸಮೀಕ್ಷೆ ಹಾಗೂ ನಿಖರ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಹುದ್ದೆಯಿಂದ ಜ್ಞಾನೇಶ್ ಕುಮಾರ್ ವಜಾಗೊಳಿಸಿ: ಡಿಸಿಎಂ ಪರಮೇಶ್ವರ್ ಒತ್ತಾಯ

ಬೆಂಗಳೂರು: ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಅದು ತೆಗೆದುಕೊಂಡಿರುವ ಕೆಲವು ನಿರ್ಧಾರಗಳ ಕುರಿತು ಇಬ್ಬರು ಚುನಾವಣಾ ಆಯುಕ್ತರು ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರಕಟಗೊಂಡಿರುವ ವರದಿಗಳು ಇಡೀ ದೇಶವಾಸಿಗಳಲ್ಲಿ ಆತಂಕ ಮೂಡಿಸುವಂತಿದೆ. ಮೂವರು ಸದಸ್ಯರಿರುವ ಸಂವಿಧಾನಾತ್ಮಕ ಸಂಸ್ಥೆಯು ಏಕವ್ಯಕ್ತಿಯ ಪಾರುಪತ್ಯಕ್ಕೆ ಸೀಮಿತವಾಗಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ. ಭಾರತೀಯ ಚುನಾವಣಾ ಆಯೋಗವು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರೊಬ್ಬರದ್ದೇ ಸಂಸ್ಥೆಯಾಗಿ ಮಾರ್ಪಟ್ಟಿದೆಯೇ ಎಂಬ ಅನುಮಾನ ಸಹ ಕಾಡುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular